ಮಂಗನ ಕಾಯಿಲೆ ನಿಯಂತ್ರಣಕ್ಕೆ ಕ್ರಮ: ಪಾಟೀಲ್

7

ಮಂಗನ ಕಾಯಿಲೆ ನಿಯಂತ್ರಣಕ್ಕೆ ಕ್ರಮ: ಪಾಟೀಲ್

Published:
Updated:

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ): ಶಿವಮೊಗ್ಗ ಜಿಲ್ಲೆಯ ಅರಲಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಹರಡಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾಯಿಲೆ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಸಚಿವ ಶಿವರಾಜ ಪಾಟೀಲ್ ಹೇಳಿದರು.

ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಹುಬ್ಬಳ್ಳಿಗೆ ತೆರಳುವ ಮಾರ್ಗದಲ್ಲಿ ಭಾನುವಾರ ರಾತ್ರಿ ಇಲ್ಲಿ ಇಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಒಟ್ಟು 12 ಜನರಿಗೆ ಕಾಯಿಲೆ ತಗುಲಿದ್ದು, ಅವರಲ್ಲಿ ಐವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಎರಡು ಬಾರಿ ಲಸಿಕೆಯನ್ನು ಹಾಕಲಾಗಿದ್ದರೂ ಕಾಯಿಲೆ ಮರುಕಳಿಸಿದೆ’ ಎಂದರು.

‘ಮಂಗಗಳ ಸಾವಿನ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು. ಸತ್ತ ಮಂಗಳನ್ನು ಮಣ್ಣುಮಾಡದೇ ಸುಡುಬೇಕು’ ಎಂದು ವಿನಂತಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !