ಬಿಜೆಪಿ ಸೇರಲ್ಲ: ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದೇನೆ –ಶಾಸಕ ಹೆಬ್ಬಾರ್

7

ಬಿಜೆಪಿ ಸೇರಲ್ಲ: ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದೇನೆ –ಶಾಸಕ ಹೆಬ್ಬಾರ್

Published:
Updated:

ಯಲ್ಲಾಪುರ (ಉತ್ತರ ಕನ್ನಡ): ‘ನಾನು ನನ್ನ ಕುಟುಂಬದೊಂದಿಗೆ ಪ್ರವಾಸಕ್ಕೆಂದು ಅಂಡಮಾನ್‌ಗೆ ಹೋಗಿದ್ದೇನೆ. ಇತರ ಶಾಸಕರೊಂದಿಗೆ ಮುಂಬೈಗೆ ತೆರಳಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ’ ಎಂದು ಯಲ್ಲಾಪುರದ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

ಅವರು ಮಂಗಳವಾರ ‘ಪ್ರಜಾವಾಣಿ’ ಜತೆ ದೂರವಾಣಿಯಲ್ಲಿ ಮಾತನಾಡಿದರು.

‘ನೀವು ಬಿಜೆಪಿ ಸೇರ್ಪಡೆಗೊಳ್ಳುತ್ತೀರಿ ಎಂದು ಸುದ್ದಿ ಹರಡುತ್ತಿದೆಯಲ್ಲ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಬಿಜೆಪಿ ಸೇರುತ್ತೇನೆ, ರೆಸಾರ್ಟ್ ರಾಜಕೀಯ ಮಾಡುತ್ತಿದ್ದೇನೆ ಎಂದು ಸಾಕಷ್ಟು ದಿನಗಳಿಂದ ಸುಳ್ಳು ಪ್ರಚಾರ ನಡೆಯುತ್ತಿದೆ. ನನ್ನ ಪ್ರವಾಸ ಮುಗಿಸಿ ಯಲ್ಲಾಪುರಕ್ಕೆ ಗುರುವಾರ ವಾಪಸಾಗುತ್ತೇನೆ’ ಎಂದರು.

‘ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿ ಈ ಮೊದಲೇ ನಿಗದಿಯಾದಂತೆ ಶುಕ್ರವಾರ ಅಧಿಕಾರ ಸ್ವೀಕರಿಸುತ್ತೀರಾ’ ಎಂಬ ಪ್ರಶ್ನೆಗೆ, ‘ಬೆಂಗಳೂರಿನಲ್ಲಿ ನಮ್ಮ ನಾಯಕರಾದ ಎಚ್.ಕೆ.ಪಾಟೀಲ್ ಅವರು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಹೀಗಾಗಿ ನಾನು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಮುಂದೆ ಹೋಗಿದೆ. ಮುಂದಿನ ದಿನಾಂಕ ನಿಗದಿ ಪಡಿಸಿ ತಿಳಿಸುತ್ತೇನೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !