ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಚಿಂತೆನೆ

7
ಶಿವರಾಮ ಕಾರಂತ ಬಡಾವಣೆ

ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಚಿಂತೆನೆ

Published:
Updated:

ಬೆಳಗಾವಿ: ಶಿವರಾಮ ಕಾರಂತ ಬಡಾವಣೆಗಾಗಿ 3,456 ಎಕರೆ ಭೂಮಿಯನ್ನು ಮರು ಭೂಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಿಡಿಎ ಅಂತಿಮ ಅಧಿಸೂಚನೆ ಹೊರಡಿಸಿದೆ. ಇಲ್ಲಿ ಭೂಮಿ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ‍ಪರಿಶೀಲನೆ ನಡೆಯುತ್ತಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಜಿ. ಪರಮೇಶ್ವರ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಎಸ್‌.ಆರ್‌. ವಿಶ್ವನಾಥ್‌ ವಿಷಯ ಪ್ರಸ್ತಾಪಿಸಿದಾಗ ಉತ್ತರಿಸಿದ ಪರಮೇಶ್ವರ, ‘ಈ ಭೂಮಿಯಲ್ಲಿ ಹಲವರು ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಬಿಡಿಎ ನಿರಕ್ಷೇಪಣಾ ಪತ್ರ ಪಡೆದು ಕಟ್ಟಡ ನಿರ್ಮಿಸಿಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ’ ಎಂದರು.

‘ಈ ಬಡಾವಣೆಯಲ್ಲಿ ಸಾವಿರಾರು ಕುಟುಂಬಗಳು ಮನೆ ಕಟ್ಟಿಕೊಂಡಿವೆ. ಹಲವರು ನಿವೇಶನವನ್ನೂ ಖರೀದಿಸಿದ್ದಾರೆ. ಅಂಥವರ ಕಥೆ ಏನು’ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !