ನವದೆಹಲಿ: ಬೆಂಗಳೂರಿನ ಡಾ. ಕೆ. ಶಿವರಾಮ ಕಾರಂತ ಬಡಾವಣೆಗಾಗಿ 3,500 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆಯನ್ನು ಖಚಿತಪಡಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ಆದೇಶದ ಮರು
ಪರಿಶೀಲನೆ ಕೋರಿದ್ದ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮೂರು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ 2018ರ ಆಗಸ್ಟ್ 3ರಂದು ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಭೂಸ್ವಾಧೀನದಲ್ಲಿ ನಡೆದಿರುವ ಅಕ್ರಮ ಕುರಿತು ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ಅವರನ್ನು ನೇಮಿಸಿತ್ತು. ಈ ಆದೇಶದ ಮರು ಪರಿಶೀಲನೆ ಕೋರಿ ಕೆಲವು ಬಿಲ್ಡರ್‌ಗಳು ಮತ್ತು ಭೂಮಾಲೀಕರು ಕಳೆದ ಅಕ್ಟೋಬರ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಆದರೆ, ಈ ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ಎಸ್.ಅಬ್ದುಲ್ ನಜೀರ್ ಅವರಿದ್ದ ಪೀಠ, ಆದೇಶ ಮರು ಪರಿಶೀಲನೆ ಕೋರಿ ಸಲ್ಲಿಸಲಾದ ಮೇಲ್ಮನವಿ ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಮರು ಪರಿಶೀಲನೆಯ ಅಗತ್ಯ ಕಂಡುಬಂದಿಲ್ಲ ಎಂದು ಹೇಳಿದೆ.

ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಉದ್ದೇಶದಿಂದ ಸರ್ಕಾರವು 17 ಗ್ರಾಮಗಳ ಒಟ್ಟು 3,546 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 2008ರಲ್ಲಿ ಅಧಿಸೂಚನೆ ಹೊರಡಿಸಿತ್ತು. ನಂತರ ವಿವಿಧ ಹಂತಗಳಲ್ಲಿ 650 ಎಕರೆ ಭೂಮಿಯನ್ನು ಅಧಿಸೂಚನೆಯಿಂದ ಕೈಬಿಡಲು ನಿರ್ಧರಿಸಿತ್ತು.

ಈಗಾಗಲೇ ಈ ಜಮೀನಿನಲ್ಲಿ ಖಾಸಗಿ ಬಡಾವಣೆ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿಗಾಗಿ ಭಾರಿ ಪ್ರಮಾಣದಲ್ಲಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ವಕೀಲರಾದ ಸಂಜಯ್ ನುಲಿ, ಅಮಿತ್ ಪೈ ಮತ್ತು ಮಹೇಶ್ ಠಾಕೂರ್ ಅವರ ಮೂಲಕ ಮರು ಪರಿ
ಶೀಲನೆಯ ಮೇಲ್ಮನವಿ ಸಲ್ಲಿಸಿದ್ದ ಅರ್ಜಿದಾರರು ತಿಳಿಸಿದ್ದರು.

‘ಬಡಾವಣೆಗಾಗಿ ಭೂಸ್ವಾಧೀನದ ನಿಟ್ಟಿನಲ್ಲಿ 2008ರ ಡಿಸೆಂಬರ್30ರಂದು ಹೊರಡಿಸಲಾದ ಪ್ರಾಥಮಿಕ ಅಧಿಸೂಚನೆಯು ಇದುವರೆಗೂ ಕಾರ್ಯಗತಗೊಂಡಿಲ್ಲ. ಖಾಸಗಿ ಬಡಾವಣೆಗಳಿಗಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಈಗಾಗಲೇ ನಮ್ಮಿಂದ ಅಭಿವೃದ್ಧಿ ಶುಲ್ಕ ಸಂಗ್ರಹಿಸಿದ್ದು, ಬಡಾವಣೆಯ ರೂಪುರೇಷೆಗೂ ಅನುಮೋದನೆ ನೀಡಿದೆ’ ಎಂದೂ ಅರ್ಜಿದಾರರು ಹೇಳಿದ್ದರು.

ಸುಪ್ರೀಂ ಕೋರ್ಟ್ ಆದೇಶದನ್ವಯ ಭೂಮಿ ಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಬಿಡಿಎ ಕಳೆದ ನವೆಂಬರ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಇದರಿಂದಾಗಿ 17 ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿ ಕಳೆದುಕೊಳ್ಳಲಿರುವ ಕುಟುಂಬಗಳು ಹಾಗೂ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿರುವ ನೂರಾರು ಜನ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ.

‘ಕ್ಯುರೇಟಿವ್ ಅರ್ಜಿ ಸಲ್ಲಿಸುತ್ತೇವೆ’

ಪುನರ್ ಪರಿಶೀಲನಾ ಅರ್ಜಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕ್ಯುರೇಟಿವ್ ಅರ್ಜಿ ಸಲ್ಲಿಸಲಿದ್ದೇವೆ ಎಂದು ಶಿವರಾಮ ಕಾರಂತ ಬಡಾವಣೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಿ.ಆರ್.ನಂಜುಂಡಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

‘ಹಿಂದೆ ಈ ಮೊಕದ್ದಮೆಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ಪೀಠದ ಮುಂದೆಯೇ ಪುನರ್ ಪರಿಶೀಲನಾ ಅರ್ಜಿ ವಿಚಾರಣೆಗೆ ಬಂದಿತ್ತು. ಹಾಗಾಗಿ ನಮಗೆ ಹಿನ್ನಡೆ ಆಗಿದೆ. ಆದರೂ ಕಾನೂನು ಹೊರಾಟ ನಿಲ್ಲಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಈ ಹಿಂದೆ ಬಿಡಿಎ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹಾಗೂ ಬಿಡಿಎ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಅವರು ಬಡಾವಣೆಗೆ ಸ್ವಾಧೀನಪಡಿಸಿಕೊಳ್ಳಲು ಗುರುತಿಸಿರುವ ಅಷ್ಟೂ ಜಮೀನನ್ನೂ ಭೂಮಾಲೀಕರಿಗೆ ಮರಳಿಸುವ ಬಗ್ಗೆ ಭರವಸೆ ನೀಡಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದರು. ಈ ಮಾತನ್ನು ಉಳಿಸಿಕೊಳ್ಳುವಂತೆ ಕೇಳುತ್ತೇವೆ. ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಸಲಿದ್ದೇವೆ’ ಎಂದರು.

ಈ ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಬಿಡಿಎ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ಅಬ್ದುಲ್ ನಜೀರ್ ಅವರಿದ್ದ ಸುಪ್ರೀಂ ಕೋರ್ಟ್‌ನ ಪೀಠವು ಈ ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಾಗೂ ಬಿಡಿಎಗೆ 2018ರ ಆಗಸ್ಟ್ 3ರಂದು ನಿರ್ದೇಶನ ನೀಡಿತ್ತು. ಈ ಬಡಾವಣೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಕೇಶವನಾರಾಯಣ ಅವರನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಮೂರು ತಿಂಗಳ ಒಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೋರಿ ಸಂತ್ರಸ್ತರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

* ಶಿವರಾಮ ಕಾರಂತ ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ

– ರಾಕೇಶ್ ಸಿಂಗ್, ಬಿಡಿಎ ಆಯುಕ್ತ

* ಭೂಸ್ವಾಧೀನ ಕುರಿತಂತೆ ನ್ಯಾಯಾಲಯ ಏನು ಆದೇಶ ಮಾಡಿದೆ ಎಂದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯಿಸುತ್ತೇನೆ

– ಎಸ್.ಟಿ.ಸೋಮಶೇಖರ್, ಬಿಡಿಎ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.