ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು: ಶೋಭಾ ಕರಂದ್ಲಾಜೆ

Last Updated 25 ಅಕ್ಟೋಬರ್ 2018, 7:02 IST
ಅಕ್ಷರ ಗಾತ್ರ

ಹೊಸಪೇಟೆ: ‘ಸಿದ್ದರಾಮಯ್ಯನವರು, ಶ್ರೀರಾಮುಲು ವಿರುದ್ಧ ಹಗುರವಾಗಿ ಮಾತನಾಡಬಾರದು. ಅವರೊಬ್ಬ ರಾಜ್ಯದ ದೊಡ್ಡ ಮುಖಂಡರು, ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.

ನಗರದಲ್ಲಿ ಗುರುವಾರ ನಡೆದ ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ’ ಎಂದು ಹೇಳಿದರು.

ಸಂಸದ ಕರಡಿ ಸಂಗಣ್ಣ ಮಾತನಾಡಿ, ‘ಬಳ್ಳಾರಿ ಲೋಕಸಭೆಗೆ ಉಪಚುನಾವಣೆ ಬೇಕಿತ್ತಾ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ. ಆದರೆ, ರಾಮನಗರ, ಮಂಡ್ಯದಲ್ಲಿ ಚುನಾವಣೆ ಬೇಕಿತ್ತಾ ಎಂದು ನಾವು ಕೇಳಿದರೆ ಅದಕ್ಕೆ‌ ಅವರು‌ ಏನು ಹೇಳುತ್ತಾರೆ. ಬೇರೆಯವರ ಮೇಲೆ ಗೂಬೆ ಕೂರಿಸುವ ಮೊದಲು ತಾವು ಏನು ಮಾಡುತ್ತಿದ್ದೇವೆ ಎಂಬ ಪ್ರಜ್ಞೆ ಇರಬೇಕು’ ಎಂದರು.

ಉಗ್ರಪ್ಪನವರು ಚುನಾವಣೆಯಲ್ಲಿ ಗೆಲ್ಲಲಾರದ ವ್ಯಕ್ತಿ. ಈ ಚುನಾವಣೆಯಲ್ಲೂ ಅವರು ಗೆಲ್ಲುವುದಿಲ್ಲ ಎಂದು ಹೇಳಿದರು.

ನೋಟು ಅಮಾನ್ಯೀಕರಣ, ಜನ್ ಧನ್, ಆಯುಷ್ಮಾನ್, ಸ್ವಚ್ಛ ಭಾರತ ಸೇರಿದಂತೆ‌ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಮೋದಿಯವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ ಬಂದಿದ್ದು, ಅವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಬಳಿಕ ನಗರದ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಪರ ಮತ ಯಾಚಿಸಿದರು.

ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ರಾಜ್ಯ‌ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರಾಣಿ ಸಂಯುಕ್ತಾ, ಸಂಸದ ಕರಡಿ ಸಂಗಣ್ಣ, ಮುಖಂಡರಾದ ಮೃತ್ಯುಂಜಯ ಜಿನಗಾ, ಶಾಸಕ ಪರಣ್ಣ ಮುನವಳ್ಳಿ ಇದ್ದರು.

ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು
ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT