ಸೋಮವಾರ, ಜೂನ್ 14, 2021
28 °C
ಸಿಎಂ ಮುಂದೆ ಶೋಭಾ ಕರಂದ್ಲಾಜೆ ಪ್ರಶ್ನೆ

ಕರ್ಕೊಂಡ್ ಬಂದು ಬಿಟ್ ಹೋಗ್ತಿರಾ? ಸಿಎಂ ಬಿಎಸ್‌ವೈಗೆ ಶೋಭಾ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜೊತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗುತ್ತೀರಾ?’ ಎಂದು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರು ಹಾಗೂ ಅಧಕಾರಿಗಳ ಸಮ್ಮುಖದಲ್ಲಿ ಪ್ರಶ್ನಿಸಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಭಾನುವಾರ ನಡೆಯಿತು.

ವಿಧಾನಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಹುಬ್ಬಳ್ಳಿಗೂ ಅವರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಸಿಗದಿದ್ದುದ್ದಕ್ಕೆ ಸಿಟ್ಟಾಗಿದ್ದರು. ಪೊಲೀಸರಿಂದ ಗೌರವವಂದನೆ ಸ್ವೀಕರಿಸುವ ವೇಳೆ ನಡೆದ ಘಟನೆಯಿಂದ ಮುಖ್ಯಮಂತ್ರಿ ಮುಜುಗರಕ್ಕೆ ಒಳಗಾಗಬೇಕಾಯಿತು.

ತಮ್ಮೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡು ಹೋಗುವ ಇರಾದೆ ಮುಖ್ಯಮಂತ್ರಿಯದಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ‘ನನ್ನ ಬದಲು ನೀವೇ ವಿಮಾನದಲ್ಲಿ ಹೋಗಿ’ ಎಂದು ತಿಳಿಸಿದ ಪ್ರಸಂಗವೂ ನಡಯಿತು.

ಕೊನೆಗೆ ಪರಿಷತ್‌ ಸದಸ್ಯ ರವಿಕುಮಾರ್ ಬೇರೊಂದು ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿಯೊಂದಿಗೆ ಶೋಭಾ, ಬೊಮ್ಮಾಯಿ ಹುಬ್ಬಳ್ಳಿಗೆ ಪ್ರಯಾಣಿಸಿದರು. ಬೆಂಗಳೂರಿನಿಂದ ಬರುವಾಗ ರವಿಕುಮಾರ್‌ ಜೊತೆಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು