ತಕ್ಷಣವೇ 11 ಸಾವಿರ ಅತಿಥಿ ಉಪನ್ಯಾಸಕರ ನೇಮಕ: ಜಿಟಿಡಿ

7

ತಕ್ಷಣವೇ 11 ಸಾವಿರ ಅತಿಥಿ ಉಪನ್ಯಾಸಕರ ನೇಮಕ: ಜಿಟಿಡಿ

Published:
Updated:

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳಿಗೆ ತಕ್ಷಣವೇ 11,000 ಅತಿಥಿ ಉಪನ್ಯಾಸಕರ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದ್ದಾರೆ.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಹರೀಶ್‌ ಕುಮಾರ್‌ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಆನ್‌ಲೈನ್‌ ಮೂಲಕ ಭರ್ತಿ ಕಾರ್ಯ ಆರಂಭಿಸಲಾಗುವುದು ಎಂದರು.

ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ ಮಾತನಾಡಿ, ಈ ಹಿಂದೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಉಳಿಸಿಕೊಂಡು ಬಳಿಕ ಹೊಸಬರನ್ನು ನೇಮಕಗಳನ್ನು ಮಾಡಬೇಕು. ಇಲ್ಲವಾದರೆ ಈ ಹಿಂದೆ ಸೇವೆ ಸಲ್ಲಿಸಿದವರಿಗೆ ತೊಂದರೆ ಆಗುತ್ತದೆ ಎಂದು ಹೇಳಿದರು.

ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ 11 ಸಾವಿರಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆಗಳು ಖಾಲಿ ಉಳಿದಿವೆ. ದಕ್ಷಿಣಕನ್ನಡ ಜಿಲ್ಲೆಯೊಂದರಲ್ಲೇ 2000 ಹುದ್ದೆಗಳು ಖಾಲಿ ಇವೆ. ಜೂನ್‌ 25 ಕ್ಕೆ ಕಾಲೇಜುಗಳು ಪ್ರಾರಂಭವಾಗಿದ್ದರೂ, ಉಪನ್ಯಾಸಕರಿಲ್ಲದೆ ಪಾಠಗಳು ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ ಎಂದು ಹರೀಶ್‌ ಕುಮಾರ್‌ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !