ಶ್ರೀರಾಮ ಬ್ರಹ್ಮರಥೋತ್ಸವ ಸಡಗರ

ಶುಕ್ರವಾರ, ಏಪ್ರಿಲ್ 26, 2019
24 °C

ಶ್ರೀರಾಮ ಬ್ರಹ್ಮರಥೋತ್ಸವ ಸಡಗರ

Published:
Updated:
Prajavani

ಮಹದೇವಪುರ: ಹಗದೂರು ಗ್ರಾಮದಲ್ಲಿನ ಶ್ರೀರಾಮ ದೇವರ ಬ್ರಹ್ಮರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಆರೂವರೆ ಗಂಟೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಉತ್ಸವ ಆರಂಭಗೊಂಡಿತು. ರಾಮ, ಲಕ್ಷ್ಮಣ ಹಾಗೂ ಸೀತಾದೇವಿ ವಿಗ್ರಹಕ್ಕೆ ವಿವಿಧ ಹೂಗಳ ಅಲಂಕಾರ ಮಾಡಲಾಗಿತ್ತು.

ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ದೇವರಿಗ ಹೂ, ಹಣ್ಣು, ಕಾಯಿಗಳನ್ನು ಅರ್ಪಿಸಿದರು. ಬಳಿಕ ಮಧ್ಯಾಹ್ನ ಶ್ರೀರಾಮ ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಮಾಡಲಾಯಿತು. ಬಳಿಕ ನೆರೆದ ಭಕ್ತಾದಿಗಳು ರಥವನ್ನು ಹಗದೂರು ಗ್ರಾಮದ ಮುಖ್ಯರಸ್ತೆಯಲ್ಲಿ ಭಕ್ತಿಭಾವದಿಂದ ಎಳೆದು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಉತ್ಸವಕ್ಕೆ ಆಗಮಿಸಿದ ಭಕ್ತರಿಗಾಗಿ ಪಾನಕ, ಮಜ್ಜಿಗೆ ಹಾಗೂ ಕೋಸಂಬರಿ ಪ್ರಸಾದವನ್ನು ವಿತರಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !