ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್, ಸರ್ಜಾರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
‘ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ’ಎಂದು ಆರೋಪಿಸಿರುವಶ್ರುತಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ತಡರಾತ್ರಿ ಠಾಣೆಗೆ ತೆರಳಿ ಶ್ರುತಿ ದೂರು ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.