ಶುಕ್ರವಾರ, ಜೂನ್ 5, 2020
27 °C

ವಿದುಷಿ ಶ್ಯಾಮಲಾ ಭಾವೆ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸೇರಿದಂತೆ ಸಂಗೀತದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ್ದ ವಿದುಷಿ ಶ್ಯಾಮಲಾ ಜಿ. ಭಾವೆ (79) ಶುಕ್ರವಾರ ನಿಧನರಾದರು. 

ಎರಡು ವರ್ಷಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಮನೆಗೆ ಕರೆತರಲಾಗಿತ್ತು.

ಅವಿವಾಹಿತರಾಗಿದ್ದ ಅವರು ಇಲ್ಲಿನ ಶೇಷಾದ್ರಿಪುರದಲ್ಲಿ ವಾಸವಾಗಿದ್ದರು. ಮಧ್ಯಾಹ್ನದವರೆಗೆ ಶ್ಯಾಮಲಾ ಅವರ ಪಾರ್ಥಿವ ಶರೀರವನ್ನು ಸರಸ್ವತಿ ಸಂಗೀತವಿದ್ಯಾಲಯದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ
ನೆರವೇರಿಸಲಾಯಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.