ಶುಕ್ರವಾರ, ಡಿಸೆಂಬರ್ 6, 2019
21 °C

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ: ಶಾಸಕ ಎಂ.ಬಿ.ಪಾಟೀಲ ಟ್ವೀಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಂ.ಬಿ.ಪಾಟೀಲ ಟ್ವೀಟ್ ಮಾಡಿದ್ದಾರೆ.

‘ಈ ತಿಂಗಳ ಅಂತ್ಯದೊಳಗೆ ಮತ್ತೆ ಬರಲಿದೆ ಭಾಗ್ಯಗಳ ಸರ್ಕಾರ. ಇತ್ತೀಚೆಗೆ ಸರ್ಕಾರ ಇದೆಯೊ, ಇಲ್ಲವೊ ಎಂಬಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವ ಲಕ್ಷಣಗಳು ಕಾಣುತ್ತಿವೆ’ ಎಂದು ಹೇಳಿದ್ದಾರೆ.

ವಿಧಾನಸಭೆ ಉಪಚುನಾವಣೆ ನಂತರ ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಬೆನ್ನಲ್ಲೇ ಪಾಟೀಲ ಅವರು ಟ್ವೀಟ್ ಮಾಡಿರುವುದು ಕುತೂಹಲ ಕೆರಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು