ಶನಿವಾರ, ಫೆಬ್ರವರಿ 29, 2020
19 °C

ಸಿದ್ಧಗಂಗಾ ಮಠ: ಶಿವಕುಮಾರ ಶ್ರೀ ಬೆಳ್ಳಿ ಪುತ್ಥಳಿ ಪ್ರತಿಷ್ಠಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಶಿವಕುಮಾರ ಸ್ವಾಮೀಜಿ ಅವರು ಕುಳಿತಿರುವ ಭಂಗಿಯಲ್ಲಿರುವ 3 ಅಡಿ ಎತ್ತರದ 50 ಕೆ.ಜಿ ತೂಕದ ಬೆಳ್ಳಿ ಪುತ್ಥಳಿಯನ್ನು ಸಿದ್ಧಗಂಗಾ ಮಠದಲ್ಲಿರುವ ಸ್ವಾಮೀಜಿ ಅವರ ಗದ್ದುಗೆಯ ಪೀಠದಲ್ಲಿ ಮಂಗಳವಾರ ಪ್ರತಿಷ್ಠಾಪಿಸಲಾಯಿತು.

ನವದೆಹಲಿಯ ಉದ್ಯಮಿ ಹಾಗೂ ಮಠದ ಭಕ್ತ ಮುಖೇಶ್ ಗರ್ಗ್ ಈ ಪುತ್ಥಳಿಯನ್ನು ಮಠಕ್ಕೆ ನೀಡಿದ್ದಾರೆ. ಮುಂಬೈನಲ್ಲಿ ತಯಾರಾಗಿರುವ ಪುತ್ಥಳಿಯನ್ನು ಜ.19ರಂದು ಮಠಕ್ಕೆ ತರಲಾಯಿತು.

ಬೆಳಿಗ್ಗೆ ಹಳೇ ಮಠದಲ್ಲಿ ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು. ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮೆರವಣಿಗೆ ಹೊರಟು ಉದ್ಧಾನ ಶಿವಯೋಗಿಗಳ ಗದ್ದುಗೆಗೆ ತಂದು ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತರಲಾಯಿತು.

ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗವನ್ನು ಈಗಾಗಲೇ ಪ್ರತಿಷ್ಠಾಪಿಸಲಾಗಿದೆ. ಪುತ್ಥಳಿ ಪ್ರತಿಷ್ಠಾಪಿಸಿರುವ ಜಾಗದಲ್ಲಿ ಇಷ್ಟು ದಿನ ಸ್ವಾಮೀಜಿ ಅವರ ಭಾವಚಿತ್ರ ಇಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು