ಭಾನುವಾರ, ಜನವರಿ 19, 2020
24 °C

19ರಂದು ಶ್ರೀಗಳ ಪುಣ್ಯ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಜ.19ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭ ಉದ್ಘಾಟಿಸುವರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ನಾಯಕರು, ಸಚಿವರು, ಮಠಾಧೀಶರು ಪಾಲ್ಗೊಳ್ಳುವರು ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಿವಕುಮಾರ ಸ್ವಾಮೀಜಿ ಅವರ ಮೂರು ಅಡಿ ಎತ್ತರದ 50 ಕೆ.ಜಿ ತೂಕದ ಬೆಳ್ಳಿ ಪುತ್ಥಳಿ ಮಾಡಿಸಿಕೊಡುತ್ತಿರುವ ಮತ್ತು ಮಠದ ದಾಸೋಹಕ್ಕೆ ಪ್ರತಿ ತಿಂಗಳು ₹ 1 ಲಕ್ಷ ದೇಣಿಗೆ ನೀಡುವ ನವದೆಹಲಿಯ ಕೈಗಾರಿಕೋದ್ಯಮಿ ಮುಖೇಶ್ ಗರ್ಗ್ ಅವರನ್ನು ಗೌರವಿಸಲಾಗುವುದು. ಜತೆಗೆ ನವದೆಹಲಿಯ ಉಗ್ರ ನಿಗ್ರಹದಳದ ಅಧ್ಯಕ್ಷ ಮಣಿಂದರ್‌ಜೀತ್‌ ಸಿಂಗ್ ಬಿಟ್ಟ ಅವರನ್ನು ಸನ್ಮಾನಿಸಲಾಗುವುದು ಎಂದರು.

ಶಿವಕುಮಾರ ಸ್ವಾಮೀಜಿ ನಿಧನರಾದುದು 2019ರ ಜನವರಿ 21ರಂದು. ವಿದ್ಯಾರ್ಥಿಗಳಿಗೆ ಭಾನುವಾರ ಬಿಡುವು
ಇರುತ್ತದೆ. ಅವರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲು ಎರಡು ದಿನ ಮೊದಲೇ ಸ್ಮರಣೋತ್ಸವ ಹಮ್ಮಿಕೊಳ್ಳಲಾಗಿದೆ. ಒಂದು ಲಕ್ಷ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ. 7 ಕಡೆಗಳಲ್ಲಿ ಒಮ್ಮೆ 10 ಸಾವಿರ ಜನರು ಕುಳಿತು ಊಟ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು