ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ಸಿದ್ಧಗಂಗಾಶ್ರೀ

7
ಶುಕ್ರವಾರ ಮಧ್ಯಾಹ್ನ ಕರೆದೊಯ್ಯಲಾಗುವುದು: ಡಾ.ಸಿದ್ಧಲಿಂಗ ಸ್ವಾಮೀಜಿ ಮಾಹಿತಿ

ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ಸಿದ್ಧಗಂಗಾಶ್ರೀ

Published:
Updated:

ತುಮಕೂರು: ‘ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಸುಧಾರಿಸಿದೆ. ಆದಾಗ್ಯೂ ತಜ್ಞ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಪ್ರತಿಷ್ಠಿತ ರೇಲಾ ಇನ್‌ಸ್ಟಿಟ್ಯೂಟ್‌ ಆ್ಯಂಡ್ ಮೆಡಿಕಲ್ ಸೆಂಟರ್‌ಗೆ ಸ್ವಾಮೀಜಿ ಅವರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ.

ಸಿದ್ಧಗಂಗಾ ಮಠದ ಅಧ್ಯಕ್ಷ ಡಾ.ಸಿದ್ಧಲಿಂಗ ಸ್ವಾಮೀಜಿ ಗುರುವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿ, ‘ಈಗಾಗಲೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಉದ್ದೇಶದಿಂದ ಶುಕ್ರವಾರ ಮಧ್ಯಾಹ್ನ ಅಥವಾ ಸಂಜೆ ಚೆನ್ನೈಗೆ ತೆರಳಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

‘ಸ್ವಾಮೀಜಿ ಅವರಿಗೆ ಸ್ಟೆಂಟ್ ಅಳವಡಿಸುವ ಅಥವಾ ಇತರೆ ಚಿಕಿತ್ಸೆ ನೀಡುವ ಬಗ್ಗೆ ಅಲ್ಲಿಗೆ ಹೋದ ಮೇಲೆ ತಿಳಿಯಲಿದೆ’ ಎಂದು ತಿಳಿಸಿದರು.

‘ಸ್ವಾಮೀಜಿಯವರು ಗುರುವಾರ ರಾತ್ರಿಯೂ ಸ್ನಾನ, ಪೂಜೆ, ಪ್ರಸಾದ ಮಾಡಿದ್ದಾರೆ. ಆರೋಗ್ಯವಾಗಿದ್ದಾರೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

* ಇದನ್ನೂ ಓದಿ: ನಮಗೆ ಎಷ್ಟು ವಯಸ್ಸಾಯ್ತು: ಶಿವಕುಮಾರ ಸ್ವಾಮೀಜಿ ಪ್ರಶ್ನೆ

ಸ್ವಾಮೀಜಿಯವರಿಗೆ ಚಿಕಿತ್ಸೆ ನೀಡುತ್ತಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯ ಡಾ.ರವೀಂದ್ರ ಮಾತನಾಡಿ, ‘ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಈಗಾಗಲೇ ರೋಗ ನಿರೋಧಕ (ಆ್ಯಂಟಿ ಬಯೊಟಿಕ್ಸ್) ಔಷಧಿ ನೀಡಲಾಗಿದೆ. ಪದೇ ಪದೇ ಈ ರೀತಿ ಕಾಣಿಸಿಕೊಳ್ಳುವ ಸೋಂಕಿನಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ. ಅದಕ್ಕಾಗಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಚಿಕಿತ್ಸೆ ಅನಿವಾರ್ಯ’ ಎಂದು ಹೇಳಿದರು.

‘ಅದಕ್ಕಾಗಿ ನಮ್ಮ ರಾಜ್ಯ ಮತ್ತು ಹೊರ ರಾಜ್ಯದ ತಜ್ಞವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆಯಲಾಗಿದೆ. ಬೆಂಗಳೂರಿನಲ್ಲೂ ತಜ್ಞ ವೈದ್ಯರಿದ್ದಾರೆ. ಆದರೆ, ಚೆನ್ನೈನ  ಡಾ.ಎಲ್.ಎನ್.ಕುಮಾರ್ ಅವರು ವಿಶ್ವದಲ್ಲಿಯೇ ಅತ್ಯುತ್ತಮ ತಜ್ಞ ವೈದ್ಯರಾಗಿದ್ದಾರೆ’ ಎಂದು ಹೇಳಿದರು.


ಸಿದ್ಧಗಂಗಾಮಠದ ಆಡಳಿತಾಧಿಕಾರಿ ನೀಡಿದ ಪತ್ರಿಕಾ ಪ್ರಕಟಣೆ

 

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !