ಬುಧವಾರ, ಡಿಸೆಂಬರ್ 11, 2019
27 °C

ಸಿದ್ಧಗಂಗಾ ಶ್ರೀಗೆ ಜ್ವರ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ಶನಿವಾರ ಮಧ್ಯಾಹ್ನ ಅವರನ್ನು ನಗರದ ಬಿಜಿಎಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಆಸ್ಪತ್ರೆ ಆವರಣದಲ್ಲಿ ಕಾರಿನಿಂದ ಇಳಿದ ಅವರು ನಡೆದುಕೊಂಡೇ ವೈದ್ಯರ ಬಳಿ ಹೋದರು.

‘ಸ್ವಾಮೀಜಿ ಅವರಿಗೆ ತಕ್ಷಣವೇ ರಕ್ತ ಪರೀಕ್ಷೆ ಮಾಡಲಾಯಿತು. ರಕ್ತದಲ್ಲಿ ಸೋಂಕು ಇರುವುದು ಕಂಡುಬಂದಿದೆ. ಆದ್ದರಿಂದ ಹೆಚ್ಚಿನ ತಪಾಸಣೆಗಾಗಿ ದಾಖಲು ಮಾಡಿಕೊಳ್ಳಲಾಗಿದೆ' ಎಂದು ಡಾ.ರವೀಂದ್ರ ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು