ಸಿದ್ಧಗಂಗಾಶ್ರೀ ಆರೋಗ್ಯ ಸ್ಥಿರ

7

ಸಿದ್ಧಗಂಗಾಶ್ರೀ ಆರೋಗ್ಯ ಸ್ಥಿರ

Published:
Updated:
Deccan Herald

ತುಮಕೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈನ ಡಾ.ರೇಲಾ ಇನ್‌ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್‌ನ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ.

 ‘ಐ.ವಿ ಫ್ಲೂಯಿಡ್ಸ್, ರೋಗ ನಿರೋಧಕ ಔಷಧಿ ನೀಡಲಾಗಿದೆ. ದ್ರವ ರೂಪದ ಆಹಾರವನ್ನು ಭಾನುವಾರವೂ ನೀಡಿಲ್ಲ. ದೇಹಕ್ಕೆ ಅಗತ್ಯವಾದ ಎಲ್ಲ ಜೀವ ಸತ್ವಗಳನ್ನು ಫ್ಲ್ಯೂಯಿಡ್ಸ್ ಮೂಲಕವೇ ಕೊಡಲಾಗುತ್ತಿದೆ’ ಎಂದು ಸ್ವಾಮೀಜಿ ಚಿಕಿತ್ಸೆ ಉಸ್ತುವಾರಿ ವಹಿ ಸಿರುವ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸೋಂಕು ತಗಲುವ ಸಾಧ್ಯತೆಯಿಂದ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ಭಕ್ತರು ಆತಂಕ ಪಡಬೇಕಾಗಿಲ್ಲ. ಸ್ವಾಮೀಜಿ ಅವರು ಚೇತರಿಸಿಕೊಳ್ಳುತ್ತಿದ್ದರೂ ಅವರಿಗೆ ಆರೈಕೆ, ರೋಗ ನಿರೋಧಕ ಔಷಧಿಗಳ ಅಗತ್ಯ ಹೆಚ್ಚಾಗಿದೆ. ಹೀಗಾಗಿ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ಹೇಳಿದರು.ಶಾಸಕರಾದ ಆರ್.ರಾಮಲಿಂಗಾ ರೆಡ್ಡಿ, ಎಂ.ವಿ ವೀರಭದ್ರಯ್ಯ ಅವರು ಭಾನು ವಾರ ಆಸ್ಪತ್ರೆಗೆ ಭೇಟಿ ನೀಡಿ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !