ಶನಿವಾರ, ಮಾರ್ಚ್ 6, 2021
31 °C

ಒತ್ತಡ ಇಲ್ಲದಿದ್ದರೆ ಮುಂಬೈಗೆ ಏಕೆ ಹೋದರು: ಸಿದ್ದರಾಮಯ್ಯ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಯಾವುದೇ ಒತ್ತಡದಲ್ಲಿ ಶಾಸಕರು ರಾಜೀನಾಮೆ ನೀಡಿಲ್ಲ ಎಂದಾದರೆ ಮುಂಬೈಗೆ ಹೋಗುವ ಅಗತ್ಯವೇನಿತ್ತು’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಶ್ನಿಸಿದರು.

‘ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅದಕ್ಕಾಗಿ ಅವರು ಸ್ಪೀಕರ್‌ ಮೇಲೆ ಒತ್ತಡ ಹೇರಿದರೆ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗಲಿದೆ. ಈ ನಡುವೆ ಅವರನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನವನ್ನು ಮುಂದುವರಿಸಿದ್ದೇವೆ’ ಎಂದು ಹೇಳಿದರು.

‘ಎರಡನೇ ಬಾರಿ ಸಂಪುಟ ವಿಸ್ತರಣೆಯಾದಾಗ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಲು ಕೇಳಿದ್ದೆ, ಆದರೆ ನೀಡಲಿಲ್ಲ. ಮುಖ್ಯಮಂತ್ರಿ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬರುತ್ತಿರುವುದು ನನಗೆ ಗೊತ್ತಿಲ್ಲ. ಸದ್ಯಕ್ಕೆ ಈ ಹುದ್ದೆ ಖಾಲಿ ಇಲ್ಲ’ ಎಂದರು.

‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದರೆ ರಾಜೀನಾಮೆ ವಾಪಾಸ್ ಪಡೆಯುವುದಾಗಿ ಅತೃಪ್ತ ಶಾಸಕರು ಹೇಳಿದ್ದಾರೆ’ ಎಂಬ ಪ್ರಶ್ನೆಗೆ ‘ನಾನು ಮುಖ್ಯಮಂತ್ರಿ ಆಗಬಾರದೆ’ ಎಂದು ಮರು ಪ್ರಶ್ನೆ ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು