ಭಾನುವಾರ, ಸೆಪ್ಟೆಂಬರ್ 22, 2019
23 °C

‘ರೇವಣ್ಣ ಕೂಡ ಸಿಎಂ ಆಗಬಹುದು’: ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಿದ್ದು ಗುದ್ದು

Published:
Updated:

ಬೆಂಗಳೂರು: ‘ಎಚ್‌.ಡಿ.ರೇವಣ್ಣ ಅವರಿಗೂ ಕೂಡ ಸಿಎಂ ಆಗೋ ಅರ್ಹತೆ ಇದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ. 

‌‘ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕಿತ್ತು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಮುಖ್ಯಮಂತ್ರಿ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಎಚ್.ಡಿ.ರೇವಣ್ಣ ಕೂಡಾ ಒಬ್ಬರು. ಆದರೆ, ಎಲ್ಲದಕ್ಕೂ ಕಾಲ‌ ಕೂಡಿ ಬರಬೇಕು’ ಎಂದು ಟ್ವಿಟರ್‌ನಲ್ಲಿ  ಬರೆದುಕೊಂಡಿದ್ದಾರೆ. 

ಕುಮಾರಸ್ವಾಮಿ ಹೇಳಿಕೆ ಕುರಿತು ಬುಧವಾರ ಪ್ರತಿಕ್ರಿಸಿದ್ದ ಬಿ.ಎಸ್‌.ಯಡಿಯೂರಪ್ಪ, ‘ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ನೀಡಿ ತಮ್ಮ ಕನಸು ನನಸಾಗಿಸಿಕೊಳ್ಳಲಿ’ ಎಂದು ಸವಾಲು ಹಾಕಿದ್ದರು. 

ಇವನ್ನೂ ಓದಿ...

ಖರ್ಗೆ ಅವರನ್ನು ಸಿಎಂ ಮಾಡಿ: ಕುಮಾರಸ್ವಾಮಿಗೆ ಯಡಿಯೂರಪ್ಪ ಸವಾಲು

ಕಾಂಗ್ರೆಸ್‌ ಗೆದ್ದರೆ ಮೋದಿ ನೇಣು ಹಾಕಿಕೊಳ್ಳುತ್ತಾನಾ?: ಖರ್ಗೆ ಪ್ರಶ್ನೆ

Post Comments (+)