ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪ ಹಚ್ಚುವುದರಿಂದ ಕಾಯಿಲೆ ವಾಸಿ ಆಗುತ್ತಾ? ಸಿದ್ದರಾಮಯ್ಯ ವ್ಯಂಗ್ಯ

Last Updated 3 ಏಪ್ರಿಲ್ 2020, 15:49 IST
ಅಕ್ಷರ ಗಾತ್ರ

ಮೈಸೂರು: ‘ದೀಪ ಹಚ್ಚುವುದರಿಂದ ಕಾಯಿಲೆ ವಾಸಿ ಆಗುತ್ತಾ? ವಾಸಿ ಆಗುವುದಾದರೆ ಹಚ್ಚಲಿ ಬಿಡಿ, ನಮ್ಮ ಅಭ್ಯಂತರವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ವ್ಯಂಗ್ಯವಾಡಿದರು.

ನಂಜನಗೂಡಿನಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣದ ಕುರಿತು, ‘ಚೀನಾದಿಂದ ನಂಜನಗೂಡಿನ ಔಷಧ ಕಂಪನಿಗೆ ಒಂದು ಕಂಟೇನರ್‌ ಬಂದಿತ್ತು. ಆ ಕಂಟೇನರ್‌ನಿಂದ ಈ ಸಮಸ್ಯೆ ಉದ್ಭವಿಸಿರಬಹುದು ಎಂಬ ಅನುಮಾನವಿದೆ. ಕಂಟೇನರ್‌ ಪರೀಕ್ಷೆ ಮಾಡಲು ಮುಂದಾಗಿದ್ದಾರೆ. ಕಂಪನಿಯು ನಿರ್ಲಕ್ಷ್ಯ ವಹಿಸಿದ್ದರೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಹೇಳಿದ್ದೇನೆ’ ಎಂದರು.

ದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡವರು ಹೋಂ ಕ್ವಾರಂಟೈನ್‌ ಆಗಬೇಕು. ಅಧಿಕಾರಿಗಳಿಗೆ ಸಹಕಾರ ಕೊಡಬೇಕು ಎಂದು ಹೇಳಿದರು.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT