ಗುರುವಾರ , ಸೆಪ್ಟೆಂಬರ್ 19, 2019
21 °C

ಹೊರಟ್ಟಿ ನಮ್ಮ ಪಕ್ಷದ ಬಗ್ಗೆ ಮಾತನಾಡದಿರುವುದು ಒಳ್ಳೆಯದು: ಸಿದ್ದರಾಮಯ್ಯ

Published:
Updated:

ಹುಬ್ಬಳ್ಳಿ: ‘ರಮೇಶ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ತೆಗೆಯುವುದು ಕಾಂಗ್ರೆಸ್ ಪಕ್ಷದ ತೀರ್ಮಾನ. ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ನಮ್ಮ ಪಕ್ಷದ ತೀರ್ಮಾನಗಳ ಬಗ್ಗೆ ಮಾತನಾಡದಿರುವುದು ಒಳ್ಳೆಯದು’ ಎಂದು ಶಾಸಕ ಸಿದ್ದರಾಮಯ್ಯ ಹೇಳಿದರು.

ಬುಧವಾರ ಮಾಧ್ಯಮ‌ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ‘ಕೆಲ ಶಾಸಕರು ನನ್ನ ಮೇಲಿನ ಅಭಿಮಾನದಿಂದ ಮುಖ್ಯಮಂತ್ರಿ ಆಗಲಿ ಎನ್ನುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ಅವರು ಮುಖ್ಯಮಂತ್ರಿ ಸ್ಥಾನ ಈಗಂತೂ ಖಾಲಿ ಇಲ್ಲ, ಬದಲಾವಣೆ ಆಗುವ ಸೂಚನೆ ಸಹ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಬಿಜೆಪಿ ಅಧಿಕಾರ ಅವಧಿಯಲ್ಲಿ ಮೂರು ಮಂದಿ ಮುಖ್ಯಮಂತ್ರಿಗಳು ಆಡಳಿತ ನಡೆಸಿದರು. ಆರು ಮಂದಿ ಮಂತ್ರಿಗಳು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದರು. ಅಂತಹವರಿಗೆ ಮತ್ತೆ ಏಕೆ ಅಧಿಕಾರ ನೀಡಬೇಕು? ಹಿಂದೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Post Comments (+)