ಶುಕ್ರವಾರ, ಡಿಸೆಂಬರ್ 6, 2019
20 °C

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತಿದ್ದಾರೆ: ಕೆ. ಎಸ್‌. ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಪ್ಪು ಆವರಿಸಿದೆ. ಇನ್ನಾದರೂ ದೇಶ ಮತ್ತು ಜನರ ಅಭಿವೃದ್ಧಿ ಬಗ್ಗೆ ಅವರು ಧ್ಯಾನ ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರ ಸಾವಿನ ಬಗ್ಗೆ ನಾನು ಎಲ್ಲಿಯೂ ಮಾತನಾಡಿಲ್ಲ. ಅವರು ನೂರು ವರ್ಷ ಆರೋಗ್ಯ ಪೂರ್ಣವಾಗಿ ಜೀವಿಸಲಿ,’ ಎಂದು ತಿಳಿಸಿದರು.

‘ನನ್ನ ಸಾವನ್ನು ಬಯಸುವವರಿಗೆ ನಾನು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ. ಅವರು ನೂರುಕಾಲ ಬಾಳಲಿ,’ ಎಂದು ಈಶ್ವರಪ್ಪ ಅವರನ್ನು ಗುರಿಯಾಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್‌ ಮಾಡಿದ್ದರು ಎನ್ನಲಾಗಿದೆ. 

‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತಿದ್ದಾರೆ. ಅವರು ಯಾವ ಪಕ್ಷಕ್ಕೆ ಹೋಗುತ್ತಾರೋ ಆ ಎಲ್ಲ ಪಕ್ಷಗಳನ್ನೂ ಮುಗಿಸುತ್ತಾರೆ,’ ಎಂದು ಹೇಳಿದರು.

‘ಈಗ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಹುಚ್ಚು ಹಿಡಿದಿರಬೇಕು,’ ಎಂದು ಈಶ್ವರಪ್ಪ ಲೇವಡಿ ಮಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು