ಭಾನುವಾರ, ಆಗಸ್ಟ್ 1, 2021
22 °C

ಅವ್ಯವಹಾರ ನಡೆದಿಲ್ಲ ಎಂಬುದಕ್ಕೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರು ಕೊರೊನಾವೈರಸ್‌ ಸೋಂಕು‌ ನಿಯಂತ್ರಣ ಸಲಕರಣೆ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ. ದಾಖಲೆಗಳಿವೆ ಎಂದು ಹೇಳಿದರಷ್ಟೆ ಸಾಲದು. ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.

ಮುಂದುವರಿದು, ಮಾಹಿತಿ ಇದ್ದರೆ ಮುಚ್ಚಿಡುತ್ತಿರುವುದು ಯಾಕೆ? ಈ ಬಗ್ಗೆ ಮಾಹಿತಿ ಕೇಳಿದ ನನ್ನ ಪ್ರಶ್ನೆಗಳಿಗೆ ಉತ್ತರಿಸುವಂತೆ ಮುಖ್ಯಮಂತ್ರಿ ಅವರಿಗೆ ಹೇಳಿ ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ‘ಕೊರೊನಾ ಚಿಕಿತ್ಸೆಯಲ್ಲಿನ ಅವ್ಯವಹಾರದ ಆರೋಪಕ್ಕೆ ಒಬ್ಬ ಸಚಿವರು ಜತೆಯಲ್ಲಿ ಪ್ರವಾಸಕ್ಕೆ ಕರೆದಿದ್ದಾರೆ, ಇನ್ನೊಬ್ಬರು ಆಸ್ಪತ್ರೆಯ ಹೊಣೆ ಹೊರಲು ಹೇಳಿದ್ದಾರೆ. ಇವರಿಬ್ಬರಿಗೂ ಒಂದೇ ಉತ್ತರ: ದಯವಿಟ್ಟು ರಾಜೀನಾಮೆ ನೀಡಿ, ನಾವು ಪ್ರವಾಸನೂ ಮಾಡ್ತೇವೆ, ಒಂದು ಆಸ್ಪತ್ರೆಯದ್ದಲ್ಲ, ಇಡೀ ರಾಜ್ಯದ ಹೊಣೆಯನ್ನೂ ಹೊರುತ್ತೇವೆ’ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು