ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಹೇರಿಕೆ ಸಹಿಸಲಾಗದು: ಸಿದ್ದರಾಮಯ್ಯ

ಸರಣಿ ಟ್ವೀಟ್
Last Updated 3 ಜೂನ್ 2019, 9:47 IST
ಅಕ್ಷರ ಗಾತ್ರ

ಬೆಂಗಳೂರು:ಹಿಂದಿ ಹೇರಿಕೆಯನ್ನು ಸಹಿಸಲಾಗದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆಗೆ ತಮಿಳುನಾಡಿನ ರಾಜಕಾರಣಿಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರಲಾಗುತ್ತಿದೆ ಎಂಬ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕನ್ನಡ ಬಿಟ್ಟು ಇತರ ಯಾವುದೇ ಭಾಷೆ ನಮ್ಮ ಆಯ್ಕೆಯಾಗಿರಬೇಕೇ ವಿನಃ ಹೇರಿಕೆ ಸಲ್ಲ ಎಂದಿದ್ದಾರೆ.

‘ನಮ್ಮ ನಾಡು ವಿವಿಧತೆಯಲ್ಲಿ ಏಕತೆಯಿಂದ ಕೂಡಿದೆ. ಸಮಾಜಕ್ಕೆ ಶಾಂತಿಯುತ ಸಹಬಾಳ್ವೆ ಮತ್ತು ಸಾಮರಸ್ಯದ ಅಗತ್ಯವಿದೆ. ಕನ್ನಡ ನಮ್ಮ ಆಸ್ಮಿತೆ. ಇತರ ಯಾವುದೇ ಭಾಷೆಯನ್ನು ಕಲಿಯುವುದು ನಮ್ಮ ಆಯ್ಕೆಯಾಗಿರಬೇಕೇ ವಿನಃ ಹೇರಿಕೆಯಾಗಬಾರದು’ ಎಂದು ಮೊದಲ ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿಯು ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯನ್ನು ಹೇರುತ್ತದೆ. ಇದು ನಮ್ಮ ಭಾವನೆಗಳಿಗೆ ವಿರುದ್ಧವಾಗಿದೆ. ಪ್ರಾದೇಶಿಕ ಅಸ್ತಿತ್ವವನ್ನು ಗುರುತಿಸುವುದು ಕೆಲವರ ಪ್ರಕಾರ ಅಸಮಂಜಸ ಎಂದಾದಲ್ಲಿ ಹಿಂದಿ ಹೇರಿಕೆಯು ನಮ್ಮ ರಾಜ್ಯದ ಮೇಲಿನ ಕ್ರೂರ ಆಕ್ರಮಣವಲ್ಲದೆ ಬೇರೇನೂ ಅಲ್ಲ.#StopHindiImposition’ ಎಂದೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಹಿಂದಿ ಹೇರಿಕೆ ಮಾಡುವ ಬದಲು ಪ್ರಾದೇಶಿಕ ಅಸ್ತಿತ್ವವನ್ನು ಸರ್ಕಾರ ಗುರುತಿಸಬೇಕು. ತಮ್ಮದೇ ಆದ ಭಾಷೆ, ಸಂಸ್ಕೃತಿಯ ಮೂಲಕ ಅಭಿವ್ಯಕ್ತಿಗೆರಾಜ್ಯಗಳಿಗೆ ಹೆಚ್ಚು ಅವಕಾಶ ನೀಡಬೇಕು. ನಾವೆಲ್ಲ ಭಾರತದಲ್ಲಿರುವ ಕನ್ನಡಿಗರು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.

‘ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಕರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ‌ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT