ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆ: ಸಿದ್ದರಾಮಯ್ಯ

ಚಿತ್ರದುರ್ಗ: ಆಪರೇಷನ್ ಕಮಲದ ಆಡಿಯೊ ಬಗ್ಗೆ ಬಿ.ಎಸ್.ಯಡಿಯೂರಪ್ಪ ತಪ್ಪೊಪ್ಪಿಕೊಂಡಿರುವ ಹಿನ್ನಲೆ ‘ಅವರಿಗೆ ಅಧಿಕಾರದ ಹುಚ್ಚು ಹಿಡಿದಿದೆ’ ಎಂದು ಸಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಸಂವಿಧಾನಬದ್ಧವಾಗಿ ಸರ್ಕಾರವನ್ನು ರಚಿಸಲಾಗಿದೆ. ಆದರೆ ಬಿಜೆಪಿ ಅವರು ಮೈತ್ರಿ ಸರ್ಕಾರವನ್ನು ಕಿತ್ತೆಸೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
‘ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದರು. ಈಗ ಅವರೇ ಸತ್ಯ ಒಪ್ಪಿಕೊಂಡಿದ್ದಾರೆ ಹಾಗಾಗಿ ಕೂಡಲೇ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.
ಇದನ್ನೂ ಓದಿ... ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್.ಯಡಿಯೂರಪ್ಪ ತಪ್ಪೊಪ್ಪಿಗೆ
ಪ್ರತಿಕ್ರಿಯೆ ನೀಡಲ್ಲ: ಎಚ್.ಡಿ.ದೇವೇಗೌಡ
‘ಆಡಿಯೊ ವಿಚಾರ ನನಗೆ ಸಂಬಂಧಿಸಿದಲ್ಲ ಹಾಗಾಗಿ ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಇವನ್ನೂ ಓದಿ...
* ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?
* ಯಡಿಯೂರಪ್ಪಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು: ಎಚ್ಡಿಕೆ
* ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್
* ಸಿಎಂ ಕುಮಾರಸ್ವಾಮಿ ಮಾಧ್ಯಮಗೋಷ್ಠಿ; ಬಿಜೆಪಿಯಿಂದ ಶಾಸಕರಿಗೆ ಗಾಳ, ಆಡಿಯೊ ಬಿಡುಗಡೆ
* ನಕಲಿ ಆಡಿಯೊ ಕೇಳಿಸಿ ಕಥೆ ಹೇಳ್ತಿದ್ದೀರಿ: ಸಿಎಂಗೆ ಯಡಿಯೂರಪ್ಪ ತಿರುಗೇಟು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.