ಭಾನುವಾರ, ಸೆಪ್ಟೆಂಬರ್ 26, 2021
21 °C
‘ಈ ವರ್ಷವೂ ಟಿಪ್ಪು ಜಯಂತಿ ನಡೆಯಲಿದೆ’

ಯಡಿಯೂರಪ್ಪಗೆ ಬರೀ ಮೂರನೇ ಮಹಡಿ ಕನಸು: ಸಿದ್ದರಾಮಯ್ಯ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಬರೀ ವಿಧಾನಸೌಧದ ಮೂರನೇ ಮಹಡಿ (ಮುಖ್ಯಮಂತ್ರಿ ಕಚೇರಿ) ಕನಸು ಬೀಳುತ್ತದೆ. ಆದರೆ, ಅದು ಕನಸಾಗಿಯೇ ಉಳಿಯಲಿದೆ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ‌ಸಮಿತಿ ಅಧ್ಯಕ್ಷ, ಶಾಸಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಇಲ್ಲಿ‌ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ‌ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಾಲಮನ್ನಾ ಮಾಡಲು ಸಮನ್ವಯ ‌ಸಮಿತಿ ಸಭೆಯಲ್ಲಿ ‌ತೀರ್ಮಾನ ಮಾಡಲಾಗಿದೆ. ಆ ತೀರ್ಮಾನದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರಿಗೆ ಸಾಲದಿಂದ ಋಣಮುಕ್ತ ಪ್ರಮಾಣಪತ್ರ ನೀಡಲಿದ್ದಾರೆ ಎಂದು ಹೇಳಿದರು.

ಟಿಪ್ಪು ಜಯಂತಿ ಆಚರಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಅದರಂತೆ ಈ ವರ್ಷವೂ ಜಯಂತಿ ನಡೆಯಲಿದೆ ಎಂದರು‌.

ಶಾಸಕರಾದ ಎಚ್.ಕೆ.ಪಾಟೀಲ, ಪ್ರಸಾದ ಅಬ್ಬಯ್ಯ ಹಾಗೂ ‌ಕಾಂಗ್ರೆಸ್ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು