ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ಸಿದ್ದರಾಮಯ್ಯ ಟ್ವೀಟ್

ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ದರ ನಿರಂತರ ಏರಿಕೆ ಮಾಡುತ್ತಿರುವ ಕುರಿತು ಕೇಂದ್ರ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

'ಕೇವಲ ನಾಲ್ಕು ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸುಮಾರು ₹2 ಹೆಚ್ಚಿಸಲಾಗಿದೆ. ಕಚ್ಚಾ ತೈಲ ದರ ಏರಿಕೆಯಾಗುತ್ತಿದ್ದಂತೆ ಸಾಮಾನ್ಯರ ಮೇಲೆ ಹೊರೆವಹಿಸುವುದನ್ನು ಪ್ರಧಾನಿ ಬಹಳ ವೇಗವಾಗಿ ಮಾಡುತ್ತಾರೆ. ಆದರೆ, ಕಚ್ಚಾ ತೈಲ ದರ ಕಡಿಮೆಯಾದಾಗ ಬೆಲೆ ಕಡಿತಗೊಳಿಸುವ ಬಗ್ಗೆ ಜಡತನ ವಹಿಸಿರುತ್ತಾರೆ. ತೈಲ ಬೆಲೆ ಏರಿಕೆಯಾಗುತ್ತಲೇ ಇರುವಾಗ, ಬೇಡಿಕೆ ಹೆಚ್ಚಲು ನಿರೀಕ್ಷಿಸುವುದಾದರು ಹೇಗೆ?' ಎಂದು ಸಿದ್ದರಾಮಯ್ಯ ಟ್ವೀಟಿ ಮಾಡಿದ್ದಾರೆ.

ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳುಹಿಸಿಕೊಡುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಸ್ವಾಗತಿಸಿದ್ದಾರೆ. ಊರಿಗೆ ಮರಳಿದವರಿಗೆ ಉದ್ಯೋಗ ಅವಕಾಶ ಕಲ್ಪಿಸುವುದು ಹಾಗೂ ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕೂಡಲೇ ಜಾರಿ ಮಾಡುವಂತೆ ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಧಾನಿ ಕಚೇರಿ ಟ್ವಿಟರ್‌ ಖಾತೆಗಳನ್ನು ಟ್ಯಾಗ್‌ ಮಾಡಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT