ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಪ್ರತಿ ಶಾಸಕರಿಗೆ ₹ 30 ಕೋಟಿ ಆಫರ್‌: ಸಿದ್ದರಾಮಯ್ಯ ಆರೋಪ

Last Updated 30 ಡಿಸೆಂಬರ್ 2018, 13:13 IST
ಅಕ್ಷರ ಗಾತ್ರ

ಬೆಂಗಳೂರು:‘ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ₹25ರಿಂದ ₹30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ’ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ‘ಬಿಜೆಪಿ ಅವರು ಭ್ರಷ್ಟಾಚಾರಿಗಳಲ್ಲದೇ ಇದ್ದರೆ ಇಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬರುತ್ತದೆ?, ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವುದನ್ನು ಬಿಟ್ಟು ವಿರೋಧ ಪಕ್ಷವಾಗಿ ಬಿಜೆಪಿ ಇಷ್ಟು ದಿನ ಬೇರೆ ಏನು ಮಾಡಿದೆ?’ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 1,000 ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ’ರಾಜ್ಯದಲ್ಲಿ ನೂತನ ಸರ್ಕಾರಿ ಆಂಗ್ಲ‌ ಮಾಧ್ಯಮ‌ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯಾದ್ಯಂತ ಪರ ಮತ್ತು ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗುವುದು‘ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT