ಭಾನುವಾರ, ಫೆಬ್ರವರಿ 23, 2020
19 °C

ನಿರುದ್ಯೋಗ ವಿರುದ್ಧ ಅಭಿಯಾನ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹದಗೆಟ್ಟಿರುವ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದಕ್ಕೆ ಕ್ರಮ ಕೈಗೊಳ್ಳದ ಕೇಂದ್ರದ ವಿರುದ್ಧ ಹರಿಹಾಯ್ದಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 8151994411 ಸಂಖ್ಯೆಗೆ ಮಿಸ್ಡ್‌ಕಾಲ್ ನೀಡುವ ಮೂಲಕ ನಿರುದ್ಯೋಗ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳಲು ಜನರಲ್ಲಿ ವಿನಂತಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಅನರ್ಥ ಆರ್ಥಿಕತೆ ಮತ್ತು ದೂರದೃಷ್ಟಿ ಇಲ್ಲದ ಆಡಳಿತಾತ್ಮಕ ಕ್ರಮಗಳಿಂದ ದೇಶದ ಯುವಕರು ಕಂಗಾಲಾಗಿದ್ದು, ಅಭದ್ರತೆ ಎದುರಿಸುತ್ತಿದ್ದಾರೆ. ಬನ್ನಿ, ‘ಬಿಜೆಪಿ ಫಾರ್‌ ಇಂಡಿಯಾ’ ಎಂಬ ಸುಳ್ಳುಗಳ ವಿರುದ್ಧ ಧ್ವನಿ ಎತ್ತೋಣ’ ಎಂದು ಟ್ವೀಟ್‌ ಮಾಡಿದ್ದಾರೆ.

‘ರಾಜ್ಯದಲ್ಲಿ ಎದುರಾಗಿದ್ದ ನೆರೆ ಮತ್ತು ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರವನ್ನೂ ತರಾಟೆಗೆ ತೆಗೆದು
ಕೊಂಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತದಲ್ಲಿ ಸಾಮಾಜಿಕ ಅಶಾಂತಿ ನಿರ್ಮಾಣವಾಗಿದೆ’ ಎಂದು ಅವರು ತರಾಟೆಗೆ ತೆಗೆದು ಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು