ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಡೆ ಮೋದಿ ಅಲೆ: ಸಿದ್ದರಾಮಯ್ಯ

Last Updated 23 ಮೇ 2019, 17:14 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಎದ್ದಿರುವಂತೆ ಕಾಣುತ್ತದೆ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳುವ ಮೂಲಕ ಮೋದಿ ಅಲೆ ಒಪ್ಪಿಕೊಂಡಿದ್ದಾರೆ.

ಬಿಜೆಪಿಯು ರಾಷ್ಟ್ರೀಯತೆ, ಸೇನೆ, ಯುದ್ಧ, ಹಿಂದೂ– ಮುಸ್ಲಿಂ ಮೊದಲಾದ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಪ್ರಚಾರ ಮಾಡಿದೆ. ದೇಶದ ಮತದಾರರು ಭಾವುಕರು. ಇಂಥ ವಿಚಾರಗಳ ಅಲೆಯಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

ಸಿದ್ದರಾಮಯ್ಯ ಕ್ಷಮೆಯಾಚಿಸಲಿ: ಬಿಎಸ್‌ವೈ

‘ಪ್ರಧಾನಿ ಮೋದಿ ಅವರನ್ನು ಟೀಕಿಸಿದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತಿತರ ನಾಯಕರು ಈಗ ಸೋಲಿನ ಹೊಣೆ ಹೊತ್ತು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇನ್ನು ಮುಂದಾದರೂ ಜವಾಬ್ದಾರಿಯುತವಾಗಿ ವರ್ತಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.

‘ಮೋದಿ ಅವರನ್ನು ಹೀನಾಯವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ’ ಎಂದು ಹೇಳಿದರು.

‘ಮೋದಿ ನಾಯಕತ್ವದಲ್ಲಿ ದೇಶ ಬದಲಾವಣೆ ಕಾಣುತ್ತಿರುವುದು ಸ್ಪಷ್ಟ.ಮೈತ್ರಿ ಸರ್ಕಾರದ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಅಭಿವೃದ್ಧಿ ಮಾಡುವುದಾಗಿ ಸುಳ್ಳು ಹೇಳುತ್ತಿರುವುದಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT