ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪ್ ಉಲ್ಲಂಘನೆ: ಸಭಾಧ್ಯಕ್ಷರಿಗೆ ದೂರು

Last Updated 23 ಜುಲೈ 2019, 20:20 IST
ಅಕ್ಷರ ಗಾತ್ರ

ಬೆಂಗಳೂರು:ವಿಧಾನ ಸಭೆಯಲ್ಲಿ ಮಂಗಳವಾರವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವ ಸಮಯದಲ್ಲಿ ಗೈರು ಹಾಜರಾಗಿದ್ದ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಕ್ರಮ ಕೈಗೊಳ್ಳುವಂತೆ ಕೋರಿ ವಿಧಾನ ಸಭಾಧ್ಯಕ್ಷರಿಗೆ ದೂರು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ವಿಶ್ವಾಸ ಮತಕ್ಕೆ ಸೋಲುಂಟಾದ ನಂತರ ಸುದ್ದಿಗಾರರ ಜತೆ ಮಾತನಾಡಿ, ‘ಆರ್.ಶಂಕರ್ ಸೇರಿದಂತೆ ಪಕ್ಷದ ಎಲ್ಲ ಶಾಸಕರಿಗೆ ವಿಪ್ ನೀಡಲಾಗಿದ್ದು, ಸದನಕ್ಕೆ ಗೈರು ಹಾಜರಾದವರನ್ನು ಅನರ್ಹಗೊಳಿಸುವಂತೆ ಕೋರಲಾಗುವುದು. ಅನಾರೋಗ್ಯದಿಂದಾಗಿ ನಾಗೇಂದ್ರ ಅವರು ಮೊದಲೇ ಅನುಮತಿ ಪಡೆದಿದ್ದರು’ ಎಂದು ಹೇಳಿದರು.

**

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT