ಭಾನುವಾರ, ಜುಲೈ 25, 2021
22 °C

ಡಿಕೆಶಿ ಪದಗ್ರಹಣಕ್ಕೆ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪದಗ್ರಹಣ ಸಮಾರಂಭಕ್ಕೆ ಎರಡನೇ ಬಾರಿ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ. 

ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ಸಭೆ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಅನ್ವಯ ಆಗುವುದೇ ಎಂದು ಸಿದ್ದರಾಮಯ್ಯ ಅವರು ಪ್ರಶಿಸಿದ್ದಾರೆ. 

ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರ ಏನೇ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರೇ ಹೊರತು ಕಾನೂನು ಭಂಗ ಮಾಡುವವರಲ್ಲ. ಕಾನೂನಿನ ಅಡಿಯಲ್ಲೇ ನಾವು ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು