ಬುಧವಾರ, ಆಗಸ್ಟ್ 4, 2021
24 °C

ಕಣ್ಣೀರು ಸಿದ್ದರಾಮಯ್ಯ ತರಿಸಿದ್ರು, HDK ಹಾಕಿದ್ರು, BSY ಒರೆಸಿದ್ರು ಎಂದ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ‘ಕಳೆದ ಆರು ವರ್ಷಗಳಲ್ಲಿ ರಾಜ್ಯ ಕಂಡ ಮೂರು ಮುಖ್ಯಮಂತ್ರಿಗಳಲ್ಲಿ, ಸಿದ್ದರಾಮಯ್ಯ ಜನರ ಕಣ್ಣಲ್ಲಿ ನೀರು ತರಿಸಿದರು. ಕುಮಾರಸ್ವಾಮಿ ತಾವೇ ಕಣ್ಣೀರು ಹಾಕಿದರು. ಆದರೆ, ಯಡಿಯೂರಪ್ಪ ಮಾತ್ರ ಜನರ ಕಣ್ಣೀರು ಒರೆಸುವ ಕೆಲಸ ಮಾಡಿದರು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಹೇಳಿದರು.

ಶುಕ್ರವಾರ ಇಲ್ಲಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚು ಗಲಭೆ, ಹತ್ಯೆಗಳು ನಡೆದವು. ಜನರು ಕಣ್ಣೀರು ಸುರಿಸಿದರು.

ನಂತರ ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ತಾವೇ ಕಣ್ಣೀರು ಹಾಕಿದರು. ಆದರೆ, ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕಷ್ಟದಲ್ಲಿರುವವರ ಕಣ್ಣೀರು ಒರೆಸುವ ಕೆಲಸ ಮಾಡಿದರು’ ಎಂದರು.

‘ಕಳಸಾ–ಬಂಡೂರಿಗಾಗಿ ಹೋರಾಟ ನಡೆಸಿದವರ ಪಾದಮುಟ್ಟಿ ನಮಸ್ಕರಿಸುತ್ತೇನೆ. ಈ ಯೋಜನೆ ಜಾರಿಗೆ ಶ್ರಮಿಸಿದ ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು