ಶನಿವಾರ, ಡಿಸೆಂಬರ್ 7, 2019
25 °C

ಸಿದ್ದರಾಮಯ್ಯಗೆ ನನ್ನ ಮೇಲೆ ವಿಶೇಷ ಪ್ರೀತಿ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ನನ್ನ ಮೇಲೆ ವಿಶೇಷ ಪ್ರೀತಿ ಇದೆ. ಒಂದು ಕಡೆ ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು ಅಂತಾರೆ. ಇನ್ನೊಂದೆಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು ಅಂತಾರೆ. ಅವರ ಮಾತಿನ ಮರ್ಮ ಏನೆಂಬುದೇ ಗೊತ್ತಾಗುವುದಿಲ್ಲ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ವಿಜಯನಗರ ಕ್ಷೇತ್ರದ ಉಪಚುನಾವಣೆ ನಿಮಿತ್ತ ಗುರುವಾರ ಸಂಜೆ ತಾಲ್ಲೂಕಿನ ಬಸವನದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್‌ ಪರ ಪ್ರಚಾರ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯನವರಿಗೆ ನನ್ನ ಮೇಲೆ ಹೆಚ್ಚಿನ ಪ್ರೀತಿ ಬರುತ್ತಿದೆ. ಹೋದಲ್ಲಿ ಬಂದಲ್ಲಿ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಶ್ರೀರಾಮುಲು ಅವರಿಗೆ ಕನ್ನಡ ಬರಲ್ಲ ಅಂತಾರೆ. ನನ್ನದು ಬಳ್ಳಾರಿ ಕನ್ನಡ. ಅವರದು ಮೈಸೂರು ಕನ್ನಡ. ಪ್ರತಿ ಹತ್ತು ಕಿ.ಮೀ. ಭಾಷೆ ಬದಲಾಗುತ್ತದೆ ಎನ್ನುವುದು ಅವರಿಗೆ ಗೊತ್ತಿರುವ ವಿಚಾರವಲ್ಲವೇ’ ಎಂದು ಪ್ರಶ್ನಿಸಿದರು.

ಪ್ರತಿಕ್ರಿಯಿಸಿ (+)