ನನ್ನ ವಿರುದ್ಧ ಅಪಪ್ರಚಾರ:ಸಿದ್ದರಾಮಯ್ಯ

7
‘ಜಾತಿ ರಾಜಕಾರಣಿ ಅಂತಾ ಚಾಮುಂಡೇಶ್ವರಿಯಲ್ಲಿ ಸೋಲಿಸಿದರು’

ನನ್ನ ವಿರುದ್ಧ ಅಪಪ್ರಚಾರ:ಸಿದ್ದರಾಮಯ್ಯ

Published:
Updated:

ಬೆಂಗಳೂರು: ‘ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡ್ತಾನೆ ಅಂತಾ ಆಗದವರು ಅಪಪ್ರಚಾರ ಮಾಡಿ, ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿಯೇ ಬಿಟ್ಟರು’ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ನಗರದ ಕರ್ನಾಟಕ ಪ್ರದೇಶ ಕುರುಬರ ಸಂಘ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ಜಾತಿಯವರನ್ನು ದೃಷ್ಠಿಯಲ್ಲಿಟ್ಟುಕೊಂಡೇ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಯಾವುದೇ ಒಂದು ಜಾತಿಗೆ ಸೀಮಿತವಾಗದೆ, ಎಲ್ಲರನ್ನೂ ಒಳಗೊಂಡು ಆಡಳಿತ ನಡೆಸಿದ್ದೇನೆ. ನಾನು ದಲಿತ ವಿರೋಧಿಯೂ ಅಲ್ಲ ಹಿಂದೂ ವಿರೋಧಿಯೂ ಅಲ್ಲ. ನಾನೂ ಒಬ್ಬ ಹಿಂದೂನೇ, ಎಲ್ಲರನ್ನೂ ‍ಪ್ರೀತಿಸುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು.

 

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !