ಬುಧವಾರ, ಜನವರಿ 22, 2020
18 °C

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ: ಬಿಎಸ್‌ವೈ, ಈಶ್ವರಪ್ಪ ಕುಶಲೋಪರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಮಲ್ಲೇಶ್ವರದ ವೆಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡುವ ಅಗತ್ಯ ಇಲ್ಲ. ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಯಾರೂ ಬರುವುದು ಬೇಡ. ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದು ಮನೆಗೆ ಮರಳಲಿದ್ದೇನೆ. ನಂತರ ಅಲ್ಲಿಗೇ ಬನ್ನಿ’ ಎಂದು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದರು.

‘ಈ ಹಿಂದೆ ನಾನು ಸ್ಟೆಂಟ್ ಅಳವಡಿಸಿಕೊಂಡಿದ್ದೆ. ಕ್ರಿಯಾಶೀಲನಾಗಿ ಓಡಾಡಿಕೊಂಡಿದ್ದರೂ ಏನೂ ಆಗಿರಲಿಲ್ಲ. ಆದರೆ, ಇಷ್ಟು ವರ್ಷಗಳ ನಂತರ ಒಂದು ರಕ್ತ ನಾಳ ಬ್ಲಾಕ್ ಆಗಿತ್ತು. ವೈದ್ಯರು ಚಿಕಿತ್ಸೆ ನೀಡಿದ್ದಾರೆ’ ಎಂದು ಅವರು ಹೇಳಿದರು.

ಗಣ್ಯರ ಭೇಟಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ  ಕೆ.ಎಸ್‌. ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರಾದ ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ, ಜಮೀರ್ ಅಹಮದ್, ಆರ್. ಧ್ರುವನಾರಾಯಣ, ರಿಜ್ವಾನ್ ಅರ್ಷದ್, ಕೆ.ಬಿ. ಕೋಳಿವಾಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರಲ್ಲದೇ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು