ಬುಧವಾರ, ಜನವರಿ 22, 2020
16 °C

ಕಾಳಜಿ ಮಾಡಿದ ಎಲ್ಲರಿಗೂ ಥ್ಯಾಂಕ್ಸ್ ಹೇಳಿ ಮನೆಗೆ ಮರಳಿದ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜಕಾರಣದಲ್ಲಿರುವವರಿಗೆ ಯಾರೂ ಶಾಶ್ವತ ವೈರಿಗಳೂ ಅಲ್ಲ, ಮಿತ್ರರೂ ಅಲ್ಲ. ಆದರೆ ಮನುಷ್ಯತ್ವ ಎಲ್ಲಕ್ಕಿಂತಲೂ ಮುಖ್ಯ. ನನ್ನ ಆರೋಗ್ಯವನ್ನು ವಿಚಾರಿಸಿದ ಎಲ್ಲರಿಗೂ ಥ್ಯಾಂಕ್ಸ್‌ ಹೇಳ್ತೀನಿ’ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದರು.

ಮಲ್ಲೇಶ್ವರದ ವೆಗಾಸ್ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರ ಚಿಕಿತ್ಸೆಯ ನಂತರ ಚೇತರಿಸಿಕೊಂಡು ಮನೆಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ನನ್ನ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳು ರಾಜ್ಯದ ಹಲವೆಡೆ ಪೂಜೆ ಮಾಡಿಸಿ, ಪ್ರಸಾದ ಕಳಿಸಿದ್ದರು. ಅವರಿಗೂ ಧನ್ಯವಾದ ಅರ್ಪಿಸುತ್ತೇನೆ’ ಎಂದು ನುಡಿದರು.

ಮನೆಯಿಂದ ಊಟ, ಹಣ್ಣುಗಳು ತಂದುಕೊಡುತ್ತಿದ್ದ ನಾರಾಯಣಸ್ವಾಮಿ ಅವರ ಪತ್ನಿಯನ್ನು ವಿಶೇಷವಾಗಿ ನೆನೆದರು. ನಾಟಿಕೋಳಿ ಸಾರಿನ ಬಗ್ಗೆ ಕೇಳಿದ ಪ್ರಶ್ನೆಗೆ ನಗುನಗುತ್ತಲೇ ಉತ್ತರಿಸಿದರು.

 

‘ಇನ್ನೊಂದು ವಾರ ಸಂಪೂರ್ಣ ವಿಶ್ರಾಂತಿ ಪಡೆಯುತ್ತೇನೆ. ನಂತರ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ರಾಜಕಾರಣ ಕುರಿತ ಪ್ರಶ್ನೆ ಕೇಳಿದ ಮಾಧ್ಯಮ ಪ್ರತಿನಿಧಿಗೆ ‘ಯಾವುದೇ ರಾಜಕೀಯ ಪ್ರಶ್ನೆಗಳಿಗೆ ಉತ್ತರ ಕೊಡಲ್ಲ. ಡೋಂಟ್ ಆಸ್ಕ್ ಪೊಲಿಟಿಕಲ್ ಕ್ವಶ್ಚೆನ್ಸ್’ ಎಂದು ಗರಂ ಆಗಿಯೇ ಪ್ರತಿಕ್ರಿಯಿಸಿದರು.


ಮಾಧ್ಯಮಗೋಷ್ಠಿಯಲ್ಲಿ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಸಿದ್ದರಾಮಯ್ಯ

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು