ಭಾನುವಾರ, ಆಗಸ್ಟ್ 25, 2019
21 °C

ಸರಳವಾಗಿ ದಸರಾ ಆಚರಣೆ?

Published:
Updated:

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಸಂಬಂಧಿಸಿದ ಪೂರ್ವ ಸಿದ್ಧತೆಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಆ. 9ರಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ರಾಜ್ಯವನ್ನು ಬರ ತೀವ್ರವಾಗಿ ಕಾಡುತ್ತಿದ್ದು, ಮತ್ತೊಂದೆಡೆ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಉಂಟಾಗಿದೆ. ರೈತರು ಸತತವಾಗಿ ಬರದಿಂದ ನಲುಗಿದ್ದು, ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ದಸರಾವನ್ನು ಸರಳವಾಗಿ ಆಚರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸರಳ, ಅದ್ದೂರಿ ಎನ್ನುವ ಬದಲು ಸಾಂಪ್ರದಾಯಿಕ ಆಚರಣೆ ಬಗ್ಗೆಯೂ ಚರ್ಚಿಸಿ, ನಿರ್ಧರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

 

Post Comments (+)