ಗುರುವಾರ , ಏಪ್ರಿಲ್ 9, 2020
19 °C

 ಕವನ ವಾಚನದಲ್ಲಿ ಮೋದಿ ಅವಹೇಳನ ಆರೋಪ: ಸಿರಾಜ್, ರಾಜಾಭಕ್ಷಿ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಆನೆಗೊಂದಿ ಉತ್ಸವದಲ್ಲಿ ಸಿಎಎ ವಿರೋಧಿಸಿ ಕವನ ವಾಚನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಸಾಹಿತಿ ಸಿರಾಜ್ ಬಿಸರಳ್ಳಿ ಮತ್ತು ಕನ್ನಡ ನೆಟ್‌ ಡಾಟ್‌ ಕಾಂ ಸಂಪಾದಕ ರಾಜಾಭಕ್ಷಿ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಉತ್ಸವದ ವಿದ್ಯಾರಣ್ಯ ವೇದಿಕೆಯಲ್ಲಿ ಸಿಎಎ ವಿರೋಧಿಸಿ 'ನೀ ಯಾವಾಗ ದಾಖಲೆ ನೀಡುತ್ತೀ' ಎಂಬ ಕವನ ವಾಚಿಸಿದ್ದರು. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದ ರಾಜಾಭಕ್ಷಿ ಅವರ ಮೇಲೆ ಬಿಜೆಪಿ ಯುವ ಮೋರ್ಚಾದ ಮುಖಂಡರೊಬ್ಬರು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಾದ ನಂತರ ಜಾಮೀನು ದೊರೆಯದೇ ಇಬ್ಬರೂ ತಲೆ ಮರೆಸಿಕೊಂಡಿದ್ದರು. ಮಂಗಳವಾರ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಲು ನ್ಯಾಯಾಲಯಕ್ಕೆ ಬಂದಿದ್ದರು. ಮಧ್ಯಂತರ ಜಾಮೀನನ್ನು ನ್ಯಾಯಾಲಯ ತಾಂತ್ರಿಕ ಕಾರಣದಿಂದ ತಿರಸ್ಕರಿಸಿತು. ಹೆಚ್ಚಿನ ವಿಚಾರಣೆ ನಡೆಸಲು ತಮ್ಮ ವಶಕ್ಕೆ ನೀಡಬೇಕು ಎಂಬ ಪೊಲೀಸರ ಮನವಿ ಮೇರೆಗೆ ನ್ಯಾಯಾಧೀಶರು ಬುಧವಾರ ಮಧ್ಯಾಹ್ನ 2 ಗಂಟೆವರೆಗೆ ನೀಡಿ ಆದೇಶ ನೀಡಿದರು.

ಪೊಲೀಸರು ಇಬ್ಬರನ್ನು ತಮ್ಮ ವಶಕ್ಕೆ ಪಡೆದು ಕರೆದುಕೊಂಡು ಹೋದರು. ಬುಧವಾರ ಗಂಗಾವತಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು