ಬಿಸಿಯೂಟ; ಸಿರಿಧಾನ್ಯ ಆಹಾರಕ್ಕೆ ಚಿಂತನೆ

7
ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬಿಸಿಯೂಟ; ಸಿರಿಧಾನ್ಯ ಆಹಾರಕ್ಕೆ ಚಿಂತನೆ

Published:
Updated:
Prajavani

ತುಮಕೂರು: ‘ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ವಾರದಲ್ಲಿ ಒಂದು ದಿನ ಮಕ್ಕಳಿಗೆ ಸಿರಿಧಾನ್ಯದ ಆಹಾರ ನೀಡಲು ಸರ್ಕಾರ ಚಿಂತಿಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.

ನಗರದ ಗಾಜಿನ ಮನೆಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

‘ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಇಂದಿರಾ ಕ್ಯಾಂಟೀನ್‌ಗಳಲ್ಲೂ ವಾರದಲ್ಲಿ ಒಂದು ದಿನ ಸಿರಿಧಾನ್ಯ ಊಟದ ವ್ಯವಸ್ಥೆ ಮಾಡಬೇಕು ಎಂಬ ಉದ್ದೇಶ ಇದೆ. ಇದರಿಂದ ಜನರ ಆರೋಗ್ಯವೂ ಸುಧಾರಿಸುತ್ತದೆ. ಸಿರಿಧಾನ್ಯ ಬೆಳೆದ ರೈತರಿಗೂ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

‘ತೆರಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಚಲನಚಿತ್ರ ನಟ, ನಿರ್ಮಾಪಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರೆ ತಪ್ಪೇನಿಲ್ಲ. ಬೇರೆ ಉದ್ದೇಶ ಇಟ್ಟುಕೊಂಡು ದಾಳಿ ನಡೆದಿದ್ದರೆ ಅದು ತಪ್ಪು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !