‘ಯುದ್ಧೋಪಾದಿಯಲ್ಲಿ ರಕ್ಷಣೆ: ಸಿ.ಎಂ

7
2,500 ನಾಗರಿಕರ ರಕ್ಷಣೆ; ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ

‘ಯುದ್ಧೋಪಾದಿಯಲ್ಲಿ ರಕ್ಷಣೆ: ಸಿ.ಎಂ

Published:
Updated:
Deccan Herald

ಬೆಂಗಳೂರು: ‘ಸತತ ಮಳೆ, ಬಿರುಗಾಳಿ, ಗುಡ್ಡ ಕುಸಿತದಿಂದ ತತ್ತರಿಸಿ ಹೋಗಿರುವ ಕೊಡಗಿನಲ್ಲಿ ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. 2,500ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಶನಿವಾರ ಕೊಡಗಿಗೆ ತೆರಳುವುದಕ್ಕೂ ಮುನ್ನ ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅತಿವೃಷ್ಟಿ ಪೀಡಿತ ಜಿಲ್ಲೆಗಳ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ‘ಕೊಡಗಿನಲ್ಲಿ ಪದೇ ಪದೇ ಗುಡ್ಡಗಳು ಕುಸಿಯುತ್ತಿರುವುದರಿಂದ ಕೆಲವು ಪ್ರದೇಶಗಳನ್ನು ತಲುಪಲು ರಕ್ಷಣಾ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಆದರೆ, ಅಲ್ಲಿ ಸಿಲುಕಿರುವ ನಾಗರಿಕರಿಗೆ ಹೆಲಿಕಾಪ್ಟರ್ ಮೂಲಕ ಆಹಾರ, ನೀರು ಪೂರೈಸಲಾಗುತ್ತಿದೆ’ ಎಂದರು.

‘ಕೊಡಗು ಜಿಲ್ಲಾಧಿಕಾರಿ ಜತೆ ವಿಡಿಯೊ ಸಂವಾದ ನಡೆಸಿದಾಗ ನಾಗರಿಕರಿಗೆ ಸೀಮೆಎಣ್ಣೆ, ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್‌ ಹಾಗೂ ಡೀಸೆಲ್ ಅವಶ್ಯಕತೆ ಇರುವುದಾಗಿ ತಿಳಿಸಿದರು. ತಕ್ಷಣ ಅವುಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಯಿತು. ಎಟಿಎಂಗಳಿಗೆ ಹಣ ತುಂಬುವಂತೆ ಆ ಭಾಗದ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು
ವಿವರಿಸಿದರು.

‘ಕೊಡಗಿನ ಗ್ರಾಮವೊಂದರಲ್ಲಿ ಶುಕ್ರವಾರ ಸುಮಾರು 200 ಎಕರೆ ಭೂಕುಸಿತ ಉಂಟಾಗಿತ್ತು. ಅಲ್ಲಿದ್ದ 342 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರು, ಮಂಡ್ಯ, ಹಾಸನ, ರಾಮನಗರ ಜಿಲ್ಲೆಗಳಿಂದ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯರ ತಂಡಗಳನ್ನು ಕೊಡಗಿಗೆ ಕಳುಹಿಸಲಾಗಿದೆ. ಔಷಧಗಳು, ಹೊದಿಕೆಗಳು, ಬಟ್ಟೆಗಳು ಹಾಗೂ 2.50 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗಿದೆ’ ಎಂದು ಅವರು ತಿಳಿಸಿದರು

‘ಹಾಸನ ಡೇರಿಯಿಂದ 25,000 ಲೀಟರ್ ಹಾಲು, 200 ಕ್ವಿಂಟಲ್ ಅಕ್ಕಿ, ಬೇಳೆ ಹಾಗೂ ಅಡುಗೆ ಎಣ್ಣೆ ಕಳುಹಿಸಲಾಗಿದೆ. ಸಾರ್ವಜನಿಕರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಕಳುಹಿಸುತ್ತಿದ್ದಾರೆ’ ಎಂದೂ ಹೇಳಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !