ಬುಧವಾರ, ಜುಲೈ 15, 2020
25 °C
ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಆತಂಕ

ಆನ್‌ಲೈನ್ ಶಿಕ್ಷಣದಿಂದ ಕೊಳೆಗೇರಿ ಮಕ್ಕಳಿಗೆ ಅನ್ಯಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನ್‌ಲೈನ್‌ ಕ್ಲಾಸ್‌ –ಸಾಂದರ್ಭಿಕ ಚಿತ್ರ

ಬೆಂಗಳೂರು: ‘ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೆ ತಂದರೆ ಕೊಳೆಗೇರಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ’ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಆತಂಕ ವ್ಯಕ್ತಪಡಿಸಿದೆ.

ಆನ್‌ಲೈನ್ ಶಿಕ್ಷಣ ಮಾರ್ಗಸೂಚಿ ಸಮಿತಿಗೆ ಪತ್ರ ಬರೆದಿರುವ ಸಂಘಟನೆಯ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ‘ರಾಜ್ಯದಲ್ಲಿ 2,850ಕ್ಕೂ ಹೆಚ್ಚು ಕೊಳೆಗೇರಿಗಳಲ್ಲಿ ಒಂದು ಕೋಟಿಗೂ ಹೆಚ್ಚು ಜನ ವಾಸ ಮಾಡುತ್ತಿದ್ದಾರೆ. ಇಲ್ಲಿನ ಶೇ 75ರಷ್ಟು ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ಕಲಿಯುತ್ತಿದ್ದಾರೆ. ಇವರಿಗೆ ಆನ್‌ಲೈನ್ ಶಿಕ್ಷಣ ಕೊಡಿಸುವಷ್ಟು ವ್ಯವಸ್ಥೆಯನ್ನು ಪೋಷಕರು ಹೊಂದಿಲ್ಲ’ ಎಂದು ಹೇಳಿದ್ದಾರೆ. 

‘ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಇಲ್ಲಿನ ನಿವಾಸಿಗಳು ಲಾಕ್‌ಡೌನ್ ನಂತರ ಕೂಲಿ ಸಿಗದೆ ಬರಿಗೈ ಆಗಿದ್ದಾರೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಕೊಡಿಸಲು ಸಾಧ್ಯವೇ’ ಎಂದು ಪ್ರಶ್ನಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು