ಶನಿವಾರ, ಫೆಬ್ರವರಿ 29, 2020
19 °C

ಉತ್ತಮ ಬದುಕಿಗೆ ಸಮಾಜ ವಿಜ್ಞಾನದ ಸಂಶೋಧನೆ ಅಗತ್ಯ: ಬಿ.ಎಸ್ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತಮ ಬದುಕಿಗೆ ಸಮಾಜ ವಿಜ್ಞಾನದ ಸಂಶೋಧನೆ ಅಗತ್ಯ, ವಿಜ್ಞಾನ ಮತ್ತು ಸಮಾಜ ಜತೆ ಜತೆಯಾಗಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಆರಂಭವಾದ 43ನೇ ಭಾರತೀಯ ಸಮಾಜ ವಿಜ್ಞಾನ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಸಮಾವೇಶಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಜಾರಿಗೆ ತರುವ ಕೆಲಸ ಆಗಬೇಕು ಎಂದು ತಿಳಿಸಿದರು.

ಭಾರತೀಯ ಸಮಾಜ ವಿಜ್ಞಾನ ಅಕಾಡೆಮಿ ಸಹಯೋಗದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಈ ಸಮಾವೇಶ ಹಮ್ಮಿಕೊಂಡಿದೆ. ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ 21ರ ವರೆಗೆ ಸಮಾವೇಶ ನಡೆಯಲಿದ್ದು, 700 ಪ್ರಬಂಧಗಳನ್ನು ಮಂಡಿಸಲಾಗುತ್ತದೆ.

ಸಿಎಂಗೆ ಅನಾರೋಗ್ಯ
ಅನಾರೋಗ್ಯ ಕಾರಣ ಸಿಎಂ ಯಡಿಯೂರಪ್ಪ ಕಾರ್ಯಕ್ರಮಕ್ಕೆ ತಡವಾಗಿ ಬಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು