ಬುಧವಾರ, ಅಕ್ಟೋಬರ್ 5, 2022
26 °C

ಚುನಾವಣಾ ಕರ್ತವ್ಯದಲ್ಲಿದ್ದ ಯೋಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಿರಿಯಾಪಟ್ಟಣ: ಲೋಕಸಭಾ ಚುನಾವಣಾ ಕರ್ತವ್ಯ ನಿರ್ವಹಿಸಲು ಉತ್ತರಪ್ರದೇಶದ ರಾಯ್‌ಬರೇಲಿಗೆ ತೆರಳಿದ್ದ,  ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧ ತಾಲ್ಲೂಕಿನ ಆರ್‌.ಕೆ. ಪ್ರಕಾಶ್‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದು ಅವರು ಹುಣಸೂರಿನಲ್ಲಿ ನೆಲೆಸಿದ್ದಾರೆ.

ರಾಮನಾಥತುಂಗ ಗ್ರಾಮದವರಾದ ಪ್ರಕಾಶ್‌, ಮೈಸೂರಿನ ಆರ್‌ಬಿಐನಲ್ಲಿ ಸಿಐಎಸ್ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಾರ್ಥಿವ ಶರೀರವನ್ನು ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಮನಾಥತುಂಗ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು