ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಕೆ

ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 200 ಮನೆಗಳ ನಿರ್ಮಾಣ: ವಿ.ಸೋಮಣ್ಣ ಪ್ರಕಟ
Last Updated 5 ಜೂನ್ 2020, 20:15 IST
ಅಕ್ಷರ ಗಾತ್ರ

ಮಡಿಕೇರಿ: ಜಾಗ ಒದಗಿಸಿದರೆ ಕೊಡಗು ಜಿಲ್ಲೆಯಲ್ಲಿ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 200 ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪ್ರಕಟಿಸಿದರು.

ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಂಬೂರಿನಲ್ಲಿ ಕೆಲವು ಮನೆಗಳು ಪೂರ್ಣಗೊಳ್ಳದಿರುವ ಬಗ್ಗೆ ಮಾಹಿತಿ ಇದ್ದು, ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಹೇಳಿದರು.

ಕೊಡಗು ಜಿಲ್ಲೆಯ ಜಂಬೂರು, ಮದೆನಾಡು, ಕರ್ಣಂಗೇರಿಯಲ್ಲಿ ನಿರ್ಮಿಸಿರುವ ಮನೆಗಳು ರಾಷ್ಟ್ರದಲ್ಲಿಯೇ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಮತ್ತು ನಿಯಂತ್ರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಿದ್ದರಿಂದ ಕೊರೊನಾ ವೈರಸ್‍ನ್ನು ನಿಯಂತ್ರಿಸಲು ಸಾಧ್ಯವಾಗಿದೆ. ಆ ದಿಸೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ನುಡಿದರು.

ಪ್ರತಿ ಹಂತದ ಅಧಿಕಾರಿಗಳು ಸಮಾಜ ಮುಖಿಯಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ. ಆ ನಿಟ್ಟಿನಲ್ಲಿ ಶ್ರದ್ಧೆ, ಇಚ್ಛಾಶಕ್ತಿ ಇರಬೇಕು. ಆ ದಿಸೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, ಕೋವಿಡ್-19 ಮತ್ತು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸಿದ್ದು, ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದಾಗ ಜನಪ್ರತಿನಿಧಿಗಳು ಬೆನ್ನು ತಟ್ಟುವಂತಾಗಬೇಕು. ಆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಒಳ್ಳೆಯ ಗುಣ ಮಾದರಿ ಎಂದರು

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ, ಪ್ರತಿಯೊಬ್ಬರ 5 ಬೆರಳುಗಳು ಸಮನಾಗಿ ಇರುವುದಿಲ್ಲ. ಆದ್ದರಿಂದ ಎಲ್ಲರನ್ನು ಒಟ್ಟುಗೂಡಿಸಿಕೊಂಡು ಹೋದಾಗ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಸಮಾಜದಲ್ಲಿ ಪ್ರತಿಯೊಬ್ಬರೂ ಆತ್ಮತೃಪ್ತಿಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಆತ್ಮವಂಚನೆ ಮಾಡಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.

ಕೊರೊನಾ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ. ಈ ಕಾರ್ಯ ಮುಂದುವರೆಸಬೇಕು. ಮುಂದಿನ ಮಳೆಗಾಲದಲ್ಲಿಯೂ ಸಹ ಉತ್ತಮವಾಗಿ, ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಮಾಡಬೇಕು ಎಂದು ಶಾಸಕರು ಸಲಹೆ ಮಾಡಿದರು.

ಕೋವಿಡ್-19 ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಮಾಜಕ್ಕೆ ಮಾದರಿಯಾಗಿ ಅಧಿಕಾರಿಗಳು ಕಾರ್ಯ ನಿರ್ವಹಿಸಿದ್ದೀರಿ ಎಂದು ವಿಧಾನ ಪರಿಷತ್‌ ಸುನಿಲ್ ಸುಬ್ರಮಣಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT