ಮಂಗಳವಾರ, ಫೆಬ್ರವರಿ 25, 2020
19 °C

ಮಾರ್ಚ್ 5ಕ್ಕೆ ಬಜೆಟ್ | ಮಾಧ್ಯಮಗಳಿಗೆ ಅವಕಾಶ ಇಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರ್ಚ್ 5 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈ ಬಾರಿ ಅಧಿವೇಶನಕ್ಕೆ ಎಲೆಕ್ಟ್ರಾನಿಕ್ ಮಾಧ್ಯಮಗಳ ಕ್ಯಾಮರಾಗಳಿಗೆ ವಿಧಾನಸಭೆಯ ಒಳಗೆ ಅವಕಾಶವಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿರುವ ಅವರು, ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯ ವ್ಯವಸ್ಥೆ ಇಲ್ಲೂ ಪಾಲಿಸಲಾಗುತ್ತದೆ ಎಂದರು.

ಫೆಬ್ರುವರಿ 17ರಿಂದ 31ರವರಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ.  ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆ ಆಗಲಿದೆ ಎಂದರು. ಅಧಿವೇಶನದಲ್ಲಿ ಒಟ್ಟು 6 ಮಸೂದೆ ಮಂಡನೆ ಆಗಲಿವೆ. ಎಲ್ಲಾ ಸದಸ್ಯರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾಗೇರಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವಕ್ಕೆ ಬದ್ಧ, ಸಂವಿಧಾನವೇ ಸರ್ವಸ್ವ: ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು