ಶನಿವಾರ, ಮೇ 15, 2021
26 °C
ಪ್ರಧಾನ ಕಾರ್ಯದರ್ಶಿಯಿಂದ ಸಲಹೆ ಕೋರಿಕೆ

ಪಿಯು: ವಿಶೇಷ ಭತ್ಯೆಗೆ ಸರ್ಕಾರದ ಚಿಂತನೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪದವಿಪೂರ್ವ ಕಾಲೇಜುಗಳಿಗೆ 2008ರ ಆಗಸ್ಟ್‌ 1ರ ಬಳಿಕ ನೇಮಕಗೊಂಡ ಉಪನ್ಯಾಸಕರಿಗೆ ವಿಶೇಷ ಭತ್ಯೆ ನೀಡುವ ಕುರಿತಂತೆ ಸರ್ಕಾರ ಚಿಂತನೆ ಆರಂಭಿಸಿದೆ.

‌ವಿವಿಧ ಉಪನ್ಯಾಸಕರ ಸಂಘಗಳ ಬೇಡಿಕೆಗಳು, ಕೋರ್ಟ್‌ ತೀರ್ಪು, ಶಿಕ್ಷಣ ಸಚಿವರೊಂದಿಗೆ ನಡೆಸಿದ ಮಾತುಕತೆಗಳು ಸಹಿತ ಹಲವಾರು ದಾಖಲೆಗಳನ್ನು ಮುಂದಿಟ್ಟು, ವಿಶೇಷ ಭತ್ಯೆ ನೀಡುವ ವಿಚಾರದಲ್ಲಿ ಮಾರ್ಗದರ್ಶನ ನೀಡಬೇಕು ಎಂದು ಇಲಾಖೆಯ ನಿರ್ದೇಶಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

‘ಸರ್ಕಾರದ ಆದೇಶದಂತೆ 2008ರ ನಂತರ ನೇಮಕಗೊಂಡ ಉಪನ್ಯಾಸಕರ ಭತ್ಯೆ ವಸೂಲಿ ಮಾಡಲು ಪ್ರಾಂಶುಪಾಲರು ಮುಂದಾಗಿದ್ದರು. ಈ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗಳು ವಿಶೇಷ ಭತ್ಯೆ ವಸೂಲಿ ಮಾಡದಂತೆ ಸೂಚಿಸಿವೆ. ವಿಶೇಷ ಭತ್ಯೆಯನ್ನು ವೇತನದಲ್ಲಿ ವಿಲೀನಗೊಳಿಸುವ ಸಂಬಂಧ ಕಡತದ ಪ್ರಕ್ರಿಯೆಯು ಪ್ರಗತಿಯಲ್ಲಿದೆ, ಈಗಲಾದರೂ ವಿಶೇಷ ಭತ್ಯೆ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಒತ್ತಾಯಿಸಿದ್ದಾರೆ.

ವಿಶೇಷ ಭತ್ಯೆ ನೀಡಲು ಮುಂದಾದರೆ ಪ್ರೌಢಶಾಲೆ ಅಧ್ಯಾಪಕರಿಗೂ ಅನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ. ಕರಬಸಪ್ಪ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು