ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಜಿಲ್ಲೆಗಳಲ್ಲೂ ಕೋವಿಡ್ ಬಾಧಿತರ ಚಿಕಿತ್ಸೆಗೆ ವಿಶೇಷ ಆಸ್ಪತ್ರೆ: ಶ್ರೀರಾಮುಲು

Last Updated 1 ಏಪ್ರಿಲ್ 2020, 10:03 IST
ಅಕ್ಷರ ಗಾತ್ರ

ಬಾಗಲಕೋಟೆ: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಅದರಂತೆ ಕಾರ್ಯೋನ್ಮುಖವಾಗಿದ್ದೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಸೋಂಕು ಪರೀಕ್ಷೆಗೆ ಬಾಗಲಕೋಟೆಯಲ್ಲಿ ವಿಶೇಷ ಲ್ಯಾಬ್ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಇಲ್ಲಿನ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜ್ ಆಡಳಿತ ಮಂಡಳಿಗೆ ಸೂಚಿಸಲಾಗಿದೆ. ರಾಜ್ಯದಲ್ಲಿ ಬುಧವಾರ ಬೆಳಿಗ್ಗೆವರೆಗೆ 101 ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿವೆ. ಅವರಲ್ಲಿ 8 ಜನ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ ಎಂದರು.
ಇಲ್ಲಿಯವರೆಗೆ ಒಟ್ಟು 3243 ಜನರ ಗಂಟಲು ದ್ರವ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದೆ. ಅದರಲ್ಲಿ 3025 ನೆಗಟಿವ್ ಬಂದಿವೆ. ಇನ್ನೂ 133 ಜನರ ವರದಿ ಬರಬೇಕಾಗಿದೆ. ರಾಜ್ಯದಲ್ಲಿ 33 ಸಾವಿರ ಜನರನ್ನು ಹೊಂ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲಿಜ್ ಜಮಾತ್ ಧಾರ್ಮಿಕ ಸಭೆಗೆ ಹೋದವರ ಬಗ್ಗೆ ಮಾಹಿತಿ ಕೊಡಲು ಸಾರ್ವಜನಿಕರಿಗೆ ಸಚಿವರು ಮನವಿ ಮಾಡಿದರು.

ವಿದೇಶದಿಂದ 16, 550 ತ್ರಿ ಲೇಯರ್ ಮಾಸ್ಕ್, 2215 ಎನ್ 95 ಮಾಸ್ಕ್, 2030 ಪ್ರೊಟೆಕ್ಷನ್ ಕಿಟ್ ತರಿಸಲಾಗಿದೆ. ಆಯಾ ಜಿಲ್ಲೆಗಳ ಬೇಡಿಕೆಗೆ ಅನುಗುಣವಾಗಿ ಸಲಕರಣೆಗಳ ಪೂರೈಸಲಾಗುವುದು. ದೇಶದಲ್ಲಿ ಶೇ 80ರಷ್ಟು ಜನರು ಲಾಕ್‌ಡೌನ್‌ಗೆ ಸಹಕರಿಸಿದ್ದಾರೆ. ಇನ್ನುಳಿದವರಿಗೆ ತಿಳಿವಳಿಕೆ ಮೂಡಿಸಬೇಕಿದೆ. ಎಲ್ಲಿಯವರೆಗೆ ಜನರ ಸಹಕಾರ ಸಿಗುವುದಿಲ್ಲವೋ ಅಲ್ಲಿಯವರೆಗೆ ಕೊರೊನಾ ವೈರಸ್ ನಿಯಂತ್ರಣ ಕಷ್ಟ ಎಂದರು.

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸರ್ಕಾರದೊಂದಿಗೆ ಕೈಜೋಡಿಸಲು ದೇಣಿಗೆ ನೀಡುವಂತ ದಾನಿಗಳು, ಶ್ರೀಮಂತರು, ಉದ್ಯಮಿಗಳಿಗೆ ಆರೋಗ್ಯ ಸಚಿವರು ಮನವಿ ಮಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT