ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ: ಗೋವಿಂದ ಕಾರಜೋಳ

Last Updated 8 ಮೇ 2020, 5:10 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್19ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಚರ್ಮೋದ್ಯೋಗದಲ್ಲಿತೊಡಗಿರುವ ಚರ್ಮ ಕುಶಲ ಕರ್ಮಿಗಳಿಗೆ (ಕುಲಕಸುಬು) ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ಯಾಕೇಜ್ ಘೋಷಣೆ ಮಾಡಿದ್ದು,11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಈ ವಿಶೇಷ ಪ್ಯಾಕೇಜ್‌ನಿಂದ ಚರ್ಮ ಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ. ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಪರವಾಗಿ ಅಭಿನಂದಿಸುವುದಾಗಿ ಅವರುತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT