ಕ್ರೀಡಾಪಟುಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರ– ಆರೋಪ

7

ಕ್ರೀಡಾಪಟುಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರ– ಆರೋಪ

Published:
Updated:

ಬೆಳಗಾವಿ: ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಭಾರತ ಅಂಧರ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ ನಾಯ್ಕ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2012ರಿಂದ 2014ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದೇನೆ. ವಿಶ್ವಕಪ್‌ ಗೆಲ್ಲುವ ಮೂಲಕ ದೇಶದ ಗೌರವವನ್ನು ಎತ್ತಿ ಹಿಡಿದೇವು. ಆದರೆ, ನಮಗೆ ಇದುವರೆಗೆ ರಾಜ್ಯ ಸರ್ಕಾರ ಉದ್ಯೋಗ ನೀಡಿಲ್ಲ. ನಮ್ಮ ತಂಡದಲ್ಲಿ ಇದ್ದ ಇತರ ರಾಜ್ಯಗಳ ಆಟಗಾರರಿಗೆ ಅಲ್ಲಿನ ಸರ್ಕಾರಗಳು ಉದ್ಯೋಗ ಹಾಗೂ ಆರ್ಥಿಕ ಸಹಾಯ ಮಾಡಿವೆ’ ಎಂದು ಹೇಳಿದರು.

‘ಇವತ್ತು ಹಲವು ಜನ ಕ್ರೀಡಾಪಟುಗಳು ಉದ್ಯೋಗವಿಲ್ಲದೆ ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ನೊಂದು ನುಡಿದರು.

‘ಕೇವಲ ಪ್ರಶಸ್ತಿ ಪತ್ರ, ಸನ್ಮಾನ ನೀಡಿದರೆ ಸಾಲದು. ಉತ್ತಮ ಜೀವನ ನಡೆಸಲು ಕ್ರೀಡಾಪಟುಗಳಿಗೆ ಉದ್ಯೋಗ ನೀಡಬೇಕು’ ಎಂದು ಮನವಿ ಮಾಡಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !