ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ವಿ ಶ್ರೀರಾಮರೆಡ್ಡಿ ವಿರುದ್ಧ ಸಿಪಿಎಂ ಕ್ರಮ

Last Updated 20 ಡಿಸೆಂಬರ್ 2018, 16:33 IST
ಅಕ್ಷರ ಗಾತ್ರ

ಬೆಂಗಳೂರು: ಸಿಪಿಎಂ ರಾಜ್ಯ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರನ್ನು ವಿವಿಧ ಗಂಭೀರಆರೋಪಗಳ ಕಾರಣ ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದುಹಾಕಲಾಗಿದೆ.

ಶ್ರೀರಾಮರೆಡ್ಡಿ ಸಿಪಿಎಂ ಕೇಂದ್ರ ಸಮಿತಿಯ ಸದಸ್ಯರಾಗಿದ್ದರು. ಅವರ ಮೇಲಿನ ಆರೋಪಗಳ ಬಗ್ಗೆ ಪಕ್ಷದ ಆಂತರಿಕ ಶಿಸ್ತು ಸಮಿತಿ ತನಿಖೆ ನಡೆಸಿದೆ. ಆರೋಪಗಳು ಸಾಬೀತಾಗಿರುವುದರಿಂದ ಪಕ್ಷದ ಚುನಾಯಿತ ಹುದ್ದೆಗಳಿಂದ ತೆಗೆದುಹಾಕಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಇದೇ 15 ಮತ್ತು 16 ರಂದು ದೆಹಲಿಯಲ್ಲಿ ನಡೆದ ಕೇಂದ್ರೀಯ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಪಿಎಂ ಈ ಸಂಬಂಧ ದೆಹಲಿಯಲ್ಲಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ‘ ರೆಡ್ಡಿ ವಿರುದ್ಧ ಕೆಲವು ಗಂಭೀರ ಆರೋಪಗಳಿದ್ದವುಮತ್ತು ಅನುಚಿತ ವರ್ತನೆಯ ಕಾರಣಕ್ಕೆ ಹುದ್ದೆಗಳಿಂದ ತೆಗೆದು ಹಾಕಲಾಗಿದೆ’ ಎಂದು ವಿವರಿಸಿದೆ.

‘ರೆಡ್ಡಿಯವರ ಪ್ರಾಥಮಿಕ ಸದಸ್ಯತ್ವವನ್ನು ಮಾತ್ರ ಉಳಿಸಲಾಗಿದೆ. ತಾವು ಮಾಡಿದ ಅಕ್ರಮಗಳಿಗೆ ಪ್ರಾಯಶ್ಚಿತ ಮಾಡಿಕೊಳ್ಳುವುದೊಂದೇ ಅವರಿಗೆ ಉಳಿದಿರುವ ಮಾರ್ಗ’ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT